ಚಾಮರಾಜನಗರ: ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ ಜಾರಿಗೊಳಿಸಿರುವ ಸಾರಥಿ ಯೋಜನೆಯಡಿ ಚಾಮರಾಜನಗರ ತಾಲೂಕಿನ ಕೋಳಿಪಾಳ್ಯ ಗ್ರಾಮದ ಅರ್ಹ ಫಲಾನುಭವಿ ಸಾಗರ್ ಅವರಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಾರು ವಿತರಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಫಲಾನುಭವಿಗೆ ಕಾರಿನ ಕೀಲಿ ಹಸ್ತಾಂತರಿಸಿದ ಸಚಿವರು, ಸಾರಥಿ ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಬೇಕು ಎಂದು ಶುಭ ಹಾರೈಸಿದರು.
ಸರ್ಕಾರವು ವಿವಿಧ ಅಭಿವೃದ್ಧಿ ಹಾಗೂ ಸ್ವಯಂ ಉದ್ಯೋಗ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಫಲಾನುಭವಿಗಳು ತಮ್ಮ ಜೀವನಮಟ್ಟ ಸುಧಾರಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕೆಡಿಪಿ ಸದಸ್ಯ ಕಾಗಲವಾಡಿ ಮೋಳೆ ಶ್ರೀನಿವಾಸ್, ಚುಡಾ ಸದಸ್ಯ ದ್ವಾರಕಿ, ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು
