ಚಾಮರಾಜನಗರ: ತಾಲೂಕಿನ ಕಲ್ಲಹಳ್ಳಿ ಗ್ರಾಮದ ಮುಖ್ಯದ್ವಾರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಹೆಬ್ಬಾಗಿಲು ನಿರ್ಮಾಣ ಕಾಮಗಾರಿಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಭೂಮಿಪೂಜೆ ನೆರವೇರಿಸಿ ನಂತರ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿದರು
ಬಳಿಕ ಮಾತನಾಡಿದ ಸಚಿವರಾದ ಪುಟ್ಟರಂಗಶೆಟ್ಟಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಹೆಬ್ಬಾಗಿಲು ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸೂಚಿಸಿದರು.
ಕಲ್ಲಹಳ್ಳಿ ಗ್ರಾಮದಲ್ಲಿ ಈ ಹಿಂದೆ ಸುವರ್ಣ ಗ್ರಾಮ ಯೋಜನೆಯಡಿ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಗ್ರಾಮಕ್ಕೆ ಇನ್ನೂ ಯಾವುದೇ ಮೂಲಭೂತ ಸೌಕರ್ಯಗಳ ಅಗತ್ಯವಿದ್ದರೆ ತಮ್ಮ ಗಮನಕ್ಕೆ ತರುವಂತೆ ತಿಳಿಸಿದ ಸಚಿವರು, ಅಗತ್ಯ ಕ್ರಮ ಕೈಗೊಂಡು ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹೇಶ್ ಕುದರ್, ಕೆಲ್ಲಂಬಳ್ಳಿ ಸೋಮಶೇಖರ್, ಇಂಜಿನಿಯರ್ ಲತಾ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.
ಯಜಮಾನರು, ಗ್ರಾಮಸ್ಥರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಸೇರಿದ್ದರು.