ಹೆಲಿ ಟೂರಿಸಂಗೆ ಸಚಿವ ಸಿ. ಪುಟ್ಟರಂಗಶೆಟ್ಟಿ ಚಾಲನೆ

ಚಾಮರಾಜನಗರ: ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಹೆಲಿ ಟೂರಿಸಂಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹೆಲಿ ಟೂರಿಸಂಗೆ ಚಾಲನೆ ನೀಡಿದ ಸಚಿವರು, ಬಳಿಕ ಸ್ವಂತ ಹಣದಿಂದ ಟಿಕೆಟ್ ಖರೀದಿಸಿ ಹೆಲಿಕಾಪ್ಟರ್‌ನಲ್ಲಿ ನಗರ ಪ್ರದಕ್ಷಿಣೆ ಹಾಕಿದರು.

ಈ ಸಂದರ್ಭದಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಮಂಜುನಾಥ್, ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *