ಡಾ. ಬಿ.ಆರ್. ಅಂಬೇಡ್ಕರ್ ರವರ ಹಾಗೂ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ
ಚಾಮರಾಜನಗರ: ಸಚಿವರಾಗಿ ಮೊದಲಬಾರಿಗೆ ಚಾಮರಾಜನಗರ ಪಟ್ಟಣಕ್ಕೆ ಇಂದು ಆಗಮಿಸಿದ ಸಿ. ಪುಟ್ಟರಂಗಶೆಟ್ಟಿ ಅವರು ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಗರದ ಜಿಲ್ಲಾಡಳಿತ ಭವನದ ಆವರಣಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ರವರ ಹಾಗೂ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಪಟ್ಟಣದ ಚಾಮರಾಜೇಶ್ವರ ದೇವಾಲಯ, ಕೊಳದ ಗಣಪತಿ ದೇವಾಲಯ, ಮಾರಮ್ಮ ದೇವಸ್ಥಾನಗಳಿಗೆ ಸಚಿವರು ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಹಾಗೂ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದರು.
ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಇತರೆ ಗಣ್ಯರು, ಮುಖಂಡರು ಇದ್ದರು.