ಆ. 15ರಂದು ಸಚಿವ ಸಿ. ಪುಟ್ಟರಂಗಶೆಟ್ಟಿ ಧ್ವಜಾರೋಹಣ, ಸ್ವಾತಂತ್ರ್ಯೋತ್ಸವದ ಸಂದೇಶ

  • ಆ. 15ರಂದು ನಗರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಂಪುಟ ದರ್ಜೆ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡುವರು. 

ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಮುಖ್ಯ ಅತಿಥಿಗಳಾಗಿ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ (ಮುನ್ನ) ಅವರು  ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *