ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಚಾಲನೆ ನೀಡಿದರು.
ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರಿಗೆ ತೋಟಗಾರಿಕೆ ಬೆಳೆಗಳ ವೈಜ್ಞಾನಿಕ ಮಾಹಿತಿ ಹಾಗೂ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕೆ. ವೆಂಕಟೇಶ್ ಅವರು ಉದ್ಘಾಟಿಸಿದರು.
ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಯಾದ ಹೂವಿನಿಂದ ಕಲಾಕೃತಿಗಳಾದ ದೀಪದೊಳಗೆ ಕರ್ನಾಟಕದ ಭೂಪಟ, ಅಲಂಕೃತ ಆನೆಗಳು, ವಿವಿಧ ಮಾದರಿಯ ಹೂಜೋಡಣೆ, ಹೂ ಗುಚ್ಚಗಳು, ಹುಲಿ ಮೆಲೆ ಕುಳಿತಿರುವ ಮಲೆ ಮಹದೇಶ್ವರಸ್ವಾಮಿ, ವಿವಿಧ ಬಗೆಯ ತರಕಾರಿ ಕೆತ್ತನೆ, ಸಿರಿಧಾನ್ಯದ ಕಣ, ಅಲಂಕಾರಿಕ ಹೂಗಿಡಗಳು, ಕೃಷಿ, ತೋಟಗಾರಿಕೆ ಸಂಬಂಧಿತ ವಿವಿಧ ಇಲಾಖೆಗಳ ಮಳಿಗೆಗಳು, ಪ್ರಾತ್ಯೇಕ್ಷಿಕೆಗಳು, ತಾಂತ್ರಿಕ ಮಾಹಿತಿ ಎಲ್ಲವನ್ನು ಸಹ ಜಿಲ್ಲಾ ಉಸ್ತುವಾರಿ ಸಚಿವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕೆ. ವೆಂಕಟೇಶ್ ಅವರು ವಿವಿಧ ತೋಟಗಾರಿಕೆ ಬೆಳೆಗಳ ವೈಜ್ಞಾನಿಕ ಮಾಹಿತಿ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಉತ್ತಮ ಪ್ರಯತ್ನವಾಗಿದೆ. ರೈತರು ಹಾಗೂ ಜನಸಾಮಾನ್ಯರಿಗೆ ವಿವಿಧ ಇಲಾಖೆಗಳ ಸೌಲಭ್ಯಗಳ ಬಗ್ಗೆ ಮಾಹಿತಿಯ ಅರಿವು ಅವಶ್ಯವಾಗಿದೆ ಎಂದರು.
ತೋಟಗಾರಿಕಾ ಬೆಳೆಗಳ ಕುರಿತು ಹೊಸ ಹೊಸ ವಿಚಾರಗಳನ್ನು ಅರಿಯಲು ಅಸಕ್ತ ಹೊಂದಬೇಕು. ಫಲಪುಷ್ಪ ಪ್ರದರ್ಶನದ ಮಾಹಿತಿ ಹೆಚ್ಚು ಜನರನ್ನು ತಲುಪಬೇಕು. ಸರ್ಕಾರದ ಉದ್ದೇಶ ಹಾಗೂ ಸೌಲಭ್ಯಗಳು ಫಲಪ್ರದವಾಗಬೇಕು. ಈ ಕಾರ್ಯದಲ್ಲಿ ಎಲ್ಲರ ಜವಾಬ್ದಾರಿಯೂ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಕೋವಿಡ್ ವೇಳೆ ಆಕ್ಸಿಜನ್ ದುರಂತದಲ್ಲಿ ಸಂತ್ರಸ್ತರಾದ ಕುಟುಂಬದ 32 ಅವಲಂಬಿತರಿಗೆ ಫೆಬ್ರವರಿ 1ರಿಂದ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗ ಅವಕಾಶ ಕಲ್ಪಿಸಲಾಗಿದೆ. ಅವಲಂಬಿತರಿಗೆ ಖಾಯಂ ಉದ್ಯೋಗ ಕೊಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ. ಅಲ್ಲಿಯವರೆಗೆ ಹೊರಗುತ್ತಿಗೆ ಅಧಾರದಲ್ಲಿ ಜಿಲ್ಲಾಡಳಿತದಲ್ಲಿ ಉದ್ಯೋಗ ನೀಡಲಾಗುತ್ತಿದೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಫಲಪುಷ್ಪ ಪ್ರದರ್ಶನದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳು, ಪಾಲಿಹೌಸ್, ತೋಟಗಾರಿಕೆ ಬೆಳೆಗಳಿಗೆ ಸಹಾಯಧನ, ನೀರಾವರಿ ಸೌಲಭ್ಯಗಳುಗಂಗಾ ಕಲ್ಯಣ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುತ್ತಿರುವ ಆರೋಗ್ಯಕರ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಕುರಿ, ಕೋಳಿ ಸಾಕಣೆ, ಉತ್ತಮ ತಳಿಗಳ ಮೀನುಮರಿ ಉತ್ಪಾದನೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಸಹಾಯಧನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ತೋಟಗಾರಿಕಾ ಬೆಳೆಗಳ ಮಾಹಿತಿ ಕುರಿತು ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಾ ಜೆ,ಕಾಂಟ್ರಾಕ್ಟರ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮೀ, ಮುಖಂಡರು, ಇತರರು ಇದ್ದರು.