
ಮಂಡ್ಯ: ಇಂಜಿನಿಯರ್ಸ್ ದಿನದ ಅಂಗವಾಗಿ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರಿನಲ್ಲಿನ ಉದ್ಯಾನದಲ್ಲಿನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಮಾಲಾರ್ಪಣೆ ಮಾಡಿ, ಗೌರವ ಸಮರ್ಪಿಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಪಂ ಸಿಇಒ ಕೆ ಆರ್ ನಂದಿನಿ,ಮೂಡಾ ಅಧ್ಯಕ್ಷ ಬಿ ಪಿ ಪ್ರಕಾಶ್,ನಾಗೇಶ್ ಕೊಡಿಕೊಪ್ಪಲು ಸೇರಿದಂತೆ ಇತರರಿದ್ದರು.
