ಉದ್ಯಮಿ ಎ.ಜಯಸಿಂಹ ಅವರ ನಿವಾಸಕ್ಕೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ

ಚಾಮರಾಜನಗರ: ಇತ್ತೀಚೆಗೆ ನಿಧನರಾದ ಉದ್ಯಮಿ ಎ.ಜಯಸಿಂಹ ಅವರ ನಿವಾಸಕ್ಕೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಚಾಮರಾಜನಗರದ ನಂಜನಗೂಡು ರಸ್ತೆಯಲ್ಲಿರುವ ಎ.ಜಯಸಿಂಹ ಅವರ ನಿವಾಸಕ್ಕೆ ತೆರಳಿದ ಸಚಿವರು, ಕುಟುಂಬದವರೊಂದಿಗೆ ಮಾತನಾಡಿ ಅವರ ದುಃಖದಲ್ಲಿ ಭಾಗಿಯಾದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಕುದರ್, ಶಾಂತಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *