ಕರಡಿ ದಾಳಿ ಸಂತ್ರಸ್ಥ ಕುಟುಂಬಕ್ಕೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರಿಂದ ಚೆಕ್ ವಿತರಣೆ

ಚಾಮರಾಜನಗರ: ಕರಡಿ ದಾಳಿಯಿಂದ ಮೃತಪಟ್ಟ ಬಿಳಿಗಿರಿರಂಗನ ಬೆಟ್ಟದ ಸೀಗೆಬೆಟ್ಟ ಪೋಡಿನ ನಿವಾಸಿ ಸಿದ್ದು ಅವರ ನಿವಾಸಕ್ಕೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಇಂದು ಸಂಜೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸಿದ್ದು ಅವರ ತಾಯಿ ಬೇದಮ್ಮ ಅವರಿಗೆ ಸರ್ಕಾರದ ಪರವಾಗಿ 5 ಲಕ್ಷ ರೂ. ಗಳ ಚೆಕ್ ವಿತರಣೆ ಮಾಡಿದರು. ಉಳಿಕೆ ಪರಿಹಾರ ನಿಧಿಯನ್ನು ಅವರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. 

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ವಿ.ಚಂದ್ರು, ಉಪವಿಭಾಗಾಧಿಕಾರಿ ಮಹೇಶ್, ಬಿಳಿಗಿರಿರಂಗನ ಬೆಟ್ಟದ ವಲಯ ಅರಣ್ಯದ ಉಪ ಸಂರಕ್ಷಣಾಧಿಕಾರಿ ಶ್ರೀಪತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್, ವಲಯ ಅರಣ್ಯಾಧಿಕಾರಿ ವಾಸು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಜೆ. ಯೋಗೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಸಿ.ಡಿ. ಮಹದೇವ್, ಇತರರು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *