ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಅವರಿಂದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸನ್ಮಾನ

ಚಾಮರಾಜನಗರ: ನೂತನವಾಗಿ ಕಾವೇರಿ ಜಲನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿರುವ ಪಿ.ಮರಿಸ್ವಾಮಿ ಅವರು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಸನ್ಮಾನ ಸ್ವೀಕರಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿದ ಅವರು, ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ರೈತರಿಗೆ ಅನುಕೂಲವಾಗುವಂತಹ ಕೆಲಸಗಳನ್ನು ಮಾಡುವ ಮೂಲಕ ರೈತರಿಗೆ ಬೆನ್ನೆಲುಬಾಗಿ ಎಂದರು.

ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಕಾವೇರಿ ಜಲನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ನಾಲೆ ಹಾಗೂ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಎಪಿಎಂಸಿ ಸದಸ್ಯ ಆಲೂರು ಪ್ರದೀಪ್, ಗ್ರಾ.ಪಂ. ಅಧ್ಯಕ್ಷ ಶೇಖರಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಎಂ.ಶಿವಸ್ವಾಮಿ, ನಗರಸಭಾ ಸದಸ್ಯ ರಾಜಪ್ಪ, ಆರ್.ಉಮೇಶ್, ಮಾಜಿ ಗ್ರಾ.ಪಂ. ಅಧ್ಯಕ್ಷ ಚಿನ್ನಸ್ವಾಮಿ, ಕಾಂಗ್ರೆಸ್ ಯುವ ಮುಖಂಡ ದ್ವಾರಕೀ ಉಪ್ಪಾರ್, ಮುಖಂಡರಾದ ಬಸಪ್ಪನ ಪಾಳ್ಯದ ನಟರಾಜ್, ಎನ್.ಆರ್.ಪುರುಷೋತ್ತಮ್, ಅಸಂಘಟಿತ ಕಾರ್ಮಿಕ ಸಂಘದ ಸ್ವಾಮಿ, ನಸ್ರುಲ್ಲಾ ಖಾನ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪುಟ್ಟಸ್ವಾಮಿ, ರಾಜಣ್ಣ,ಕುಮಾರ್, ಎಚ್.ಎಸ್.ವೈ.ಐ. ಮೋಹನ್ ನಗು, ಗೋವಿಂದರಾಜು ಸೇರಿದಂತೆ ಮತ್ತಿತರರಿದ್ದರು.

Leave a Reply

Your email address will not be published. Required fields are marked *