ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಂದ ಕರಿನಂಜನಪುರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ನಿರ್ದೇಶಕರಿಗೆ ಅಭಿನಂದನೆ

ಚಾಮರಾಜನಗರ: ಕರಿನಂಜನಪುರದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ನಿರ್ದೇಶಕರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಸನ್ಮಾನಿಸಿ ಅಭಿನಂದಿಸಿದರು.


ನಂತರ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು, ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವ ನೂತನ ನಿರ್ದೇಶಕರು ಡೇರಿಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಶ್ರಮ ವಹಿಸಬೇಕು. ಷೇರುದಾರರು ಹಾಗೂ ರೈತರಿಗೆ ಹೆಚ್ಚಿನ ಅನುಕೂಲ ವಾಗುವಂತಹ ಕೆಲಸಗಳನ್ನು ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಸಂಘದ ನೂತನ ನಿರ್ದೇಶಕರು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ಉಪ್ಪಿನಮೋಳೆಯ ಅವರ ನಿವಾಸದಲ್ಲಿ ಭೇಟಿ ಮಾಡಿ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಗುರುಸ್ವಾಮಿ, ಬಸವಣ್ಣ, ರೇಚಣ್ಣ, ವಿರೂಪಾಕ್ಷ, ಸ್ವಾಮಿ, ನಾಗೇಂದ್ರ, ಜಗದೀಶ್, ರೂಪಾ, ಸುಂದರಮ್ಮ, ಸೋಮಣ್ಣ, ಕುಮಾರಸ್ವಾಮಿ, ಮುಖಂಡರಾದ ಅಸಂಘಟಿತ ಕಾರ್ಮಿಕ ಸಂಘದ ಬ್ಲಾಕ್ ವಿಭಾಗದ ಅಧ್ಯಕ್ಷ ಸ್ವಾಮಿ, ನಗರಸಭಾ ಮಾಜಿ ಸದಸ್ಯ ಮಹದೇವಯ್ಯ, ಮಹದೇವೇಗೌಡ, ಎಸ್.ಮಹೇಶ್, ಚಿನ್ನಸ್ವಾಮಿ ಮತ್ತಿತರರಿದ್ದರು.

Leave a Reply

Your email address will not be published. Required fields are marked *