ಚಾಮರಾಜನಗರ: ಬೆಂಗಳೂರಿನ ವಿಧಾನಸೌಧದ 2 ಮಹಡಿಯ ಕೊಠಡಿ ಸಂಖ್ಯೆ 244-245 ರಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಕೃಷಿ ಇಲಾಖೆ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಭಾಗವಹಿಸಿ ಸಚಿವರಿಗೆ ಹೂಗುಚ್ಛ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕಾವೇರಪ್ಪ ಇತರರು ಹಾಜರಿದ್ದರು.
