ಶಾಸಕ ದರ್ಶನ್ ಧೃವನಾರಾಯಣ್ ಹುಟ್ಟುಹಬ್ಬ: ಯುವ ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಚಾಮರಾಜನಗರ: ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧೃವನಾರಾಯಣ್ ಅವರ ಹುಟ್ಟುಹಬ್ಬ ಅಂಗವಾಗಿ ನಗರದ ಜಿಲ್ಲಾ ಸರ್ಕಾರಿ ಜಿಲ್ಲಾಸ್ಪತ್ರೆಯ ಒಳರೋಗಿಗಳಿಗೆ ಹಣ್ಣು,-ಹಂಪಲು ವಿತರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕಾಡಾ ಅಧ್ಯಕ್ಷರಾದ ಪಿ.ಮರಿಸ್ವಾಮಿ ಮಾತನಾಡಿ, ನಂಜನಗೂಡು ವಿಧಾನಸಭಾ ಕ್ಷೇತ್ರದ ದರ್ಶನ್ ಶಾಸಕರಾದ ಧೃವನಾರಾಯಣ್ ಅವರ ಹುಟ್ಟುಹಬ್ಬದ ಅಂಗವಾಗಿ
ಜಿಲ್ಲಾ ಸರ್ಕಾರಿ ಜಿಲ್ಲಾಸ್ಪತ್ರೆಯ ಒಳರೋಗಿಗಳಿಗೆ ಹಣ್ಣು,-ಹಂಪಲು ವಿತರಿಸಲಾಗಿದೆ.ಅವರಿಗೆ ಭಗವಂತ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ರಾಜಕಾರಣದಲ್ಲಿ ಇನ್ನೂ ಉನ್ನತ ಸ್ಥಾನಮಾನ ಸಿಗಲಿ, ಅವರ ಸೇವೆ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ಮತ್ತಷ್ಟು ದೊರಕಲಿ ಎಂದು ಶುಭ ಕೋರಿದರು.
   ಈ ಸಂದರ್ಭದಲ್ಲಿ   ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ನಾಗರತ್ನ,  ಯಳಂದೂರು ಬ್ಲಾಕ್ ಅಧ್ಯಕ್ಷೆ ಭಾಗ್ಯಮ್ಮ,
ಯುವ ಕಾಂಗ್ರೆಸ್ ಚಾಮರಾಜನಗರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಅಕ್ಷಯ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಸ್ವಾಮಿ,  ಜಿಲ್ಲಾ ಉಪಾಧ್ಯಕ್ಷ ಚಂದನ್ ಪುಟ್ಟಬುದ್ದಿ, ಶಿವು,ಪ್ರಕಾಶ್, ರಾಜು,ಸುನೀಲ್ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *