ಚಾಮರಾಜನಗರ: ನವೆಂಬರ್ 26ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯ ಅಂಗವಾಗಿ ಪ್ರಚಾರಕ್ಕಾಗಿ ಸಂಚರಿಸಲಿರುವ ಎಲ್‍ಇಡಿ ಪರದೆ ವಾಹನಕ್ಕೆ ವಿವಿಧೆಡೆ ಚಾಲನೆ ನೀಡಲಾಯಿತು.
ಸಂತೇಮರಹಳ್ಳಿಯ ಬಸ್ ನಿಲ್ದಾಣದ ಬಳಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಪ್ರಚಾರದ ಎಲ್.ಇ.ಡಿ ಪರದೆಯ ಸ್ತಬ್ದ ಚಿತ್ರ ವಾಹನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಹೆಚ್.ವಿ ಚಂದ್ರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಕೇಶವ ಮೂರ್ತಿ, ಇತರರು ಇದ್ದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ತಾಲೂಕು ಅಧ್ಯಕ್ಷರಾದ ಸೊಮೇಶ್ವರ್, ವಕೀಲರ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ ಅವರು ಸಂವಿಧಾನದ ದಿನಾಚರಣೆಯ ಅಂಗವಾಗಿ ಸಂಚರಿಸಲಿರುವ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮೇಘ, ಇನ್ನಿತರರು ಉಪಸ್ಥಿತರಿದ್ದರು.
Related