ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶಾಸಕ ಮಂಜುನಾಥ್ ಸ್ಥಳ ಪರಿಶೀಲನೆ ನಡೆಸಿದರು.
ಬೆಟ್ಟದ ನಾಗಮಲೆ ಅತಿಥಿಗೃಹದ ಬಳಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿ ಬೆಟ್ಟದಲ್ಲಿ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಾಡುತ್ತಿರುವುದು ಹೆಮ್ಮೆ ಪಡುವ ವಿಚಾರ ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜು ಕಪ್ಪಸೋಗೆ ಅವರಿಂದ ಕಾರ್ಯಕ್ರಮ ಕುರಿತು ಅಗತ್ಯ ಮಾಹಿತಿ ಪಡೆದುಕೊಂಡರು.