ಚಾಮರಾಜನಗರ: ತಾಲ್ಲೂಕಿನ ಮೂಡಳ ಹೂಸಹಳ್ಳಿಗ್ರಾಮದಲ್ಲಿ ಸಂಪಿಗೆ ಬೀರೇಶ್ವರಸ್ವಾಮಿದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಂಎಸ್‌ಐಎಲ್ ಅಧ್ಯಕ್ಷರು ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಬೀರೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಉತ್ತಮ ಮಳೆ-ಬೆಳೆಯಾಗಿ ಸಮೃದ್ದಿ ನೆಲೆಸಿ ರೈತರಿಗೆ ಅನುಕೂಲವಾಗಿ ಎಲ್ಲರಿಗೂ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ನಾನಾ ಗ್ರಾಮಗಳ ಸಹಸ್ರಾರು ಭಕ್ತಾದಿಗಳು ಆಗಮಿಸಿ,ಬೀರೇಶ್ವರಸ್ವಾಮಿ ದೇವರದರ್ಶನ ಪಡೆದರು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ವಿಜೃಂಭಣೆಯಿAದ ನಡೆಯಿತು.