ಹನೂರು: ಕಳೆದುಹೋದ ಮೊಬೈಲ್ ಪತ್ತೆಹಚ್ಚಿ ವಾರಸುದಾರರಿಗೆ ವಾಪಸ್ ನೀಡಿ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರೊಬ್ಬರ ಕಳೆದುಹೋದ ಮೊಬೈಲ್ ಅನ್ನು ಪೊಲೀಸರು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
ಟಿ. ನರಸೀಪುರ ತಾಲೂಕಿನ ಒರಳಹಳ್ಳಿ ಗ್ರಾಮದ ನಿವಾಸಿ ರೇವಣ್ಣ ಅವರು ದೇವರ ದರ್ಶನಕ್ಕೆ ಬಂದಿದ್ದಾಗ ಮೊಬೈಲ್ ಕಳೆದುಕೊಂಡಿದ್ದರು. ಈ ಬಗ್ಗೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು, CEIR ಪೋರ್ಟಲ್ ಮೂಲಕ ಕಾರ್ಯಾಚರಣೆ ನಡೆಸಿ ಕಳೆದುಹೋದ ಮೊಬೈಲ್ ಪತ್ತೆಹಚ್ಚಿ ಮಾಲೀಕರಿಗೆ ನೀಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
