ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಉತ್ತೇಜನ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಉತ್ತೇಜನ ನೀಡುವ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಬೇಕೆಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸವಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಗೆ ಹೆಸರುವಾಸಿಯಾಗಿರುವ ಚಾಮರಾಜನಗರ ಜಿಲ್ಲೆ ಖೋಖೋ, ಕಬ್ಬಡಿ, ವಾಲಿಬಾಲ್, ಹಗ್ಗಜಗ್ಗಾಟ ಈ ಎಲ್ಲಾ ಕ್ರೀಡೆಗಳಲ್ಲಿಯು ಜಿಲ್ಲೆಯು ಹೆಸರು ಮಾಡಿದೆ. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹಿಸುವ ಅಗತ್ಯವಿದೆ. ಇಂತಹ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ನಡೆಯುವಂತಾಗಲಿ ಎಂದರು. 

ಈಲ್ಲಾ ಕ್ರೀಡಾಂಗಣ ಅಭಿವೃದ್ದಿಗೆ ಕ್ರಮ ತೆಗೆದುಕೊಳ್ಳಲಾಗುವುದು. ಬ್ಯಾಸ್ಕೆಟ್ ಬಾಲ್ ಕೋರ್ಟ, ಜಿಮ್ ಸೌಲಭ್ಯಕ್ಕಾಗಿ ಅನುದಾನ ಬಿಡುಗಡೆಯಾಗಿದೆ. ಕ್ರೀಡಾಪಟುಗಳು ಉತ್ತಮ ಸಾಧನೆ ಮೂಲಕ ರಾಜ್ಯಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಕೆ. ಸುರೇಶ್ ಅವರು ಮಾತನಾಡಿ ತಾಲೂಕು ಗ್ರಾಮೀಣ ಕ್ರೀಡಾಕೂಟದಲ್ಲಿ ವಿಜೇತರಾದವರನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ತಾಲೂಕು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. 

ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚೂಡ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಹಿರಿಯ ಕ್ರೀಡಾಪಟು ವಿ. ಶ್ರೀನಿವಾಸ್ ಪ್ರಸಾದ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *