ಚಾಮರಾಜನಗರ: ತಾಲೂಕಿನ ಮೂಡ್ನಾಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ-ಉಪಾದ್ಯಕ್ಷರಾಗಿ ಬಿಜೆಪಿ ಬೆಂಬಲಿಗರಾದ ಬಾಲಸುಬ್ರಮಣ್ಯ ಹಾಗೂ ಚಿನ್ನಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮದ ಕಚೇರಿ ಕಚೇರಿಯಲ್ಲಿ ನಡೆದ ಅಧ್ಯಕ್ಷ –ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಾಲಸುಬ್ರಮಣ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಚಿನ್ನಸ್ವಾಮಿ ಇವರಿಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸುಭಾಷಿನಿ ಅವರು ಅಧಿಕೃತವಾಗಿ ಘೋಷಣೆ ಮಾಡಿದರು. ಈ ಹಿಂದೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ 11 ಮಂದಿ ಬೆಂಬಲಿತ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.
ನೂತನ ಅಧ್ಯಕ್ಷ ಬಾಲಸುಬ್ರಮಣ್ಯ ಅಧಿಕಾರ ವಹಿಸಿಕೊಂಡು ಮಾತನಾಡಿ, ಸಂಘದ ಸದಸ್ಯರು ನಮ್ಮ ಮೇಲೆ ವಿಶ್ವಾಸವಿಟ್ಟು ಅಧಿಕ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಅದೇ ರೀತಿ ಎಲ್ಲಾ ನಿರ್ದೇಶಕರು ನಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಅಭಾರಿಯಾಗಿದ್ದೇವೆ. ಮುಂದಿನ ದಿನಗಳಲ್ಲಿ ಸಂಘವನ್ನು ಇನ್ನು ಹೆಚ್ಚಿನ ರೀತಿಯಲ್ಲಿ ಬಲಗೊಳಿಸುವ ಜೊತೆಗೆ ಸದಸ್ಯರಿಗೆ ಹೆಚ್ಚಿನ ಸವಲತ್ತು ಕಲ್ಪಿಸಲು ಶ್ರಮಿಸೋಣ ಎಂದರು.
ಸಭೆಯಲ್ಲಿ ನೂತನ ನಿರ್ದೇಶಕರಾದ ಆರ್. ಸುರೇಶ, ಲೋಕೇಶ್. ಎಂ ಎಂ, ನಟರಾಜು, ಮಹೇಶ್, ಎಂ. ಎನ್ ಪ್ರಭುಸ್ವಾಮಿ, ಎಂಸಿ ಪ್ರಕಾಶ್ , ಶಿವಕುಮಾರ್, ಸುಂದರಮ್ಮ, ನಾಗಮ್ಮ ಕಾರ್ಯನಿರ್ವಾಹಕ ಅಧಿಕಾರಿ ಬಸವಣ್ಣ ಇದ್ದರು.
ಈ ಸಂದರ್ಭದಲ್ಲಿ ಮುಖಂಡರಾದ ಎಂ.ಬಿ. ಶಿವಮಲ್ಲಪ್ಪ, ಶಿವಬಸಪ್ಪ, ಗೌಡಿಕೆ ರೇವಣ್ಣ ಮಾಜಿ ಅಧ್ಯಕ್ಷ ಬಸಪ್ಪ, ಸಿದ್ದಪ್ಪ, ನಾಗಭೂಷನ್, ನಾಗೇಂದ್ರಪ್ರಸಾದ್, ಕುಮಾರ್ ಕೆಂಡ್, ಚಿ.ಗೌ. ಪ್ರಕಾಶ್, ನಾಗಭೂಷಣ್, ಗ್ರಾಮ ಪಂಚಾಯತಿ ಸದಸ್ಯರಾದ ನಾಗೇಂದ್ರ, ಮಾದೇಶ್, ಗಿರೀಶ್, ಮಾಜಿ ಸದಸ್ಯ ಪುಟ್ಟಸ್ವಾಮಿ, ಸುಂದರಮೂರ್ತಿ, ಸುಬ್ಬಪ್ಪ, ಕಪಿಲೆ ಬಾಬು, ಪ್ರಸಾದ್, ಪ್ರಭಾಕರ ಮೂರ್ತಿ, ಬಸವಣ್ಣ, ಡೇರಿ ಕಾರ್ಯನಿರ್ವಾಹಕ ಅಧಿಕಾರಿ ಬಸವಣ್ಣ, ಪ್ರಸಾದ್, ಹಾಗೂ ಪಕ್ಷದ ಮುಖಂಡರು ಹಾಜರಿದ್ದರು.
ನೂತನ ಅಧ್ಯಕ್ಷ-ಉಪಾದ್ಯಕ್ಷರಿಗೆ ಮಾಜಿ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಶುಭ ಕೋರಿದರು.