ಟಿಕೆಟ್ ಕೈತಪ್ಪಿದರಿಂದ ಯಾವುದೇ ಮುನಿಸು ಇಲ್ಲ : ಬಾಲರಾಜು ಗೆಲುವು ಸಾಧಿಸುವ ವಿಶ್ವಾಸ ಇದೆ
ಚಾಮರಾಜನಗರ: ಭಾರತವನ್ನು ವಿಶ್ವ ಗುರುವನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಹೀಗಾಗಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ನನ್ನ ಸಂಪೂರ್ಣ ಬೆಂಬಲ ಬಿಜೆಪಿಗೆ ಇದೆ ಎಂದು ನಿವೃತ್ತ ಐಎಫ್‍ಎಸ್ ಅಧಿಕಾರಿ ಹಾಗೂ ಬಿಜೆಪಿ ಪ್ರಮುಖ ಟಿಕೆಟ್ ಆಕಾಂಕ್ಷಿ ಡಾ. ಆರ್. ರಾಜು ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2019ರಲ್ಲಿಯೂ ಸಹ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೆ. ಹಿರಿಯರಾದ ವಿ. ಶ್ರೀನಿವಾಸ ಪ್ರಸಾದ್ ಅವರಿಗೆ ಅವಕಾಶ ಮಾಡಿಕೊಟ್ಟೆವೆ. ಈಗ 2024ರಲ್ಲಿ ಪ್ರಮುಖವಾಗಿ ನಾನು ಸಹ ರಾಜ್ಯ ಮತ್ತು ದೆಹಲಿ ಮಟ್ಟದಲ್ಲಿ ಟಿಕೆಟ್ ಪಡೆದುಕೊಳ್ಳಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದೆ. ರಾಷ್ಟ್ರೀಯ ನಾಯಕರು ಈ ಬಾರಿ ನಿಮಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದ್ದರು. ಅಂತಿಮವಾಗಿ ಎಸ್. ಬಾಲರಾಜು ಅವರಿ ಟಿಕೆಟ್ ಘೊಷಣೆಯಾಗಿದೆ. ಇದರಿಂದ ನನಗೆ ಯಾವುದೇ ಬೇಸರವಿಲ್ಲ. ಒಟ್ಟಾರೆ, ಬಿಜೆಪಿ ಗೆಲ್ಲಬೇಕು. 350ಕ್ಕು ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಮೈತ್ರಿಕೂಟದಲ್ಲಿ ಎನ್‍ಡಿಎ ಅಭ್ಯರ್ಥಿಗಳು ಬರಬೇಕು ಎಂಬುವುದು ನಮ್ಮ ಆಶಯವಾಗಿದೆ ಎಂದರು.
ನಾನು ಐಎಎಫ್ ಅಧಿಕಾರಿಯಾಗಿ ಜನ ಸಾಮಾನ್ಯರೊಂದಿಗೆ ಬೆರೆತು ಬಹಳಷ್ಟು ಸೇವೆ ಮಾಡಿದ್ದೇನೆ. ಮುಂದೆಯು ಸಹ ಜನರ ಮಧ್ಯೆ ಇದ್ದು ಸೇವ ಮಾಡುವ ಹಂಬಲ ಇದೆ. ರಾಜಕಾರಣಿಯಾಗಿ ಸೇವೆ ಮಾಡುವುದರಿಂದ ಹೆಚ್ಚಿನ ಜನರಿಗೆ ತಲುಪುಬಹುದು ಎಂಬ ಉದ್ದೇಶ ನನ್ನದಾಗಿತ್ತು. ಈಗ ಟಿಕೆಟ್ ಕೈ ತಪ್ಪಿದೆ. ಬಿಜೆಪಿ ಕಾರ್ಯಕರ್ತನಾಗಿ, ಮುಖಂಡನಾಗಿ ಪಕ್ಷದ ಅಭ್ಯರ್ಥಿ ಎಸ್. ಬಾಲರಾಜು ಅವರ ಪರವಾಗಿ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಟು ನನಗೆ ವಹಿಸುವ ಜವಾಬ್ದಾರಿಯನ್ನು ನಿರ್ವಹಿಸಲು ಬದ್ದನಾಗಿದ್ದೇನೆ. ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೂ ಸಹ ನಾನು ಶುಭ ಕೋರಿದ್ದೇನೆ. ನನ್ನನ್ನು ಪ್ರಚಾರ ಸಂದರ್ಭಗಳಲ್ಲಿ ಬಳಸಿಕೊಳ್ಳುವಂತೆ ತಿಳಿಸಿದ್ದೇನೆ. ಈ ಒಂದು ತಿಂಗಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸಂಪೂರ್ಣವಾಗಿ ನಾನು ಕ್ಷೇತ್ರದ್ಯಂತ ನನ್ನದೇ ಆದ ರೀತಿಯಲ್ಲಿ ಪ್ರಚಾರ ಮಾಡಿ, ಬಿಜೆಪಿಯನ್ನು ಗೆಲ್ಲಿಸಲು ಮುಂದಾಗಿರುವುದಾಗಿ ಆರ್. ರಾಜು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ನಗರಸಭಾ ಮಾಜಿ ಸದಸ್ಯ ಬಸವರಾಜು, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ತೊರವಳ್ಳಿ ಶಿವಕುಮಾರಸ್ವಾಮಿ, ಬಿಜೆಪಿ ಮುಖಂಡ ವಿ. ಶ್ರೀನಿವಾಸಪ್ರಸಾದ್ ಇದ್ದರು.