ಬಿಜೆಪಿ ಸಹ ವಕ್ತಾರರಾಗಿ ಎನ್.ಮಂಜುನಾಥ್ ನೇಮಕ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಭಾರತೀಯ ಜನತಾ ಪಕ್ಷದ ಸಹ ವಕ್ತಾರರಾಗಿ ಎನ್. ಮಂಜುನಾಥ್ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್ ಅದೇಶದ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಸಂಘಟನೆ ಮಾಡುವ ನಿಟ್ಟಿನಲ್ಲಿ ನಿಮ್ಮನ್ನು ಬಿಜೆಪಿ ಜಿಲ್ಲಾ ಸಹ ವಕ್ತಾರನ್ನಾಗಿ ನೇಮಕ ಮಾಡಿದ್ದು, ಇಂದಿನಿಂದ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಬಲವರ್ಧನೆಗೆ ಮುಂದಾಗಬೇಕು ಎಂದು ಅದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

ಎನ್. ಮಂಜುನಾಥ್ ಈ ಹಿಂದಿನ ಅವಧಿಗಳಲ್ಲಿ ಜಿಲ್ಲಾ ಪ್ರಮುಖ್, ಸಹ ಪ್ರಮುಖ್ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಈ ಮುಂದುವರಿದು ಸಹ ವಕ್ತಾರರನ್ನಾಗಿ ಪಕ್ಷದ ವರಿಷ್ಟರು ನೇಮಕ ಮಾಡಿದ್ದಾರೆ.

Leave a Reply

Your email address will not be published. Required fields are marked *