
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿಯಾಗಿ ನಾಗರಾಜು(ಹೌಸಿಂಗ್‍ಬೋಡ್ ರಾಜು) ಅವರನ್ನು ನೇಮಕ ಮಾಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್. ನಿರಂಜನ್‍ಕುಮಾರ್ ಅದೇಶ ಪ್ರತಿಯನ್ನು ನೀಡಿದ್ದಾರೆ.
ಇಂದಿನಿಂದಲೇ ಜಿಲ್ಲೆಯಲ್ಲಿ ಬಿಜೆಪಿಯನ್ನು ಸಂಘಟನೆ ಹಾಗೂ ಕಾರ್ಯಲಯ ನಿರ್ವಹಣೆ ದೃಷ್ಟಿಯಲ್ಲಿ ನಿಮ್ಮನ್ನು ಕಾರ್ಯಾಲಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದು, ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಅದೇಶ ಪ್ರತಿಯಲ್ಲಿ ನಿರಂಜನ್‍ಕುಮಾರ್ ತಿಳಿಸಿದ್ದಾರೆ.
ರಾಜು ಈ ಹಿಂದೆ ನಗರ ಮಂಡಲದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಬಿಜೆಪಿ ಸ್ಲಂ ಮೋರ್ಚಾ ಜಿಲ್ಲಾ ಅಧ್ಯಕ್ಷ, ಪ್ರಗೋಷ್ಠಗಳ ಜಿಲ್ಲಾ ಸಂಚಾಲಕರಾಗಿ ಜಿಲ್ಲೆಯ ವಿವಿಧ ಸ್ತರದಲ್ಲಿ ಕಾರ್ಯನಿರ್ವಹಿಸಿರುವ ಅನುಭವನ್ನು ಹೊಂದಿದ್ದಾರೆ.