ಚಾಮರಾಜನಗರ: ಸೆಪ್ಟೆಂಬರ್ 17 ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ವತಿಯಿಂದ ನಗರದ ಭುಜಂಗೇಶ್ವರ ದೇವಸ್ಥಾನದಲ್ಲಿ ನರೇಂದ್ರ ಮೋದಿ ಅಭಿಮಾನಿಗಳಿಂದ ವಿಶೇಷಪೂಜೆ ಪೂಜೆ ಸಲ್ಲಿಸಿ, ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು.
ನಂತರ ದೇವಸ್ಥಾನ ಮುಂಭಾಗದಲ್ಲಿ ನರೇಂದ್ರಮೋದಿ ಪರ ಜೈಕಾರ ಕೂಗಿ ಆಶೀರ್ವಾದದ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ನಗರ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್ ಬಾಲಸುಬ್ರಮಣ್ಯ ಮಾತನಾಡಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಭುಜಂಗೇಶ್ವರ ದೇವಸ್ಥಾನದಲ್ಲಿ ಹೋಮಗಳು ಅನ್ನದಾನ ವಿಶೇಷಪೂಜೆ ಸಲ್ಲಿಸಿ, ದೀಪಹಚ್ಚಿ ನರೇಂದ್ರಮೋದಿ ಅವರಿಗೆ ದಿ ರ್ಘಾಯುಷ್ಯ, ಉತ್ತಮ ಆರೋಗ್ಯ ಕರುಣಿಸಿ, ಅವರಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟು, ಅವರ ನವಭಾರತ ನಿರ್ಮಾಣ ಕನಸು ನನಸು ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು ಎಂದರು.
ಕೇಂದ್ರ ಬರ ಪರಿಹಾರ ಮಾಜಿ ಅಧ್ಯಕ್ಷ ಎಂ ರಾಮಚಂದ್ರು ಮಾತನಾಡಿ ನರೇಂದ್ರಮೋದಿ ಅವರ ನೇತೃತ್ವ ಸರ್ಕಾರದ ಪ್ರಮುಖ ಸಾಧನೆಗಳು ಮತ್ತು ಜನಪರ ಯೋಜನೆಗಳು ದೇಶದ ಆರ್ಥಿಕ, ಸಾಮಾಜಿಕ, ಮೂಲಸೌಕರ್ಯಗಳಲ್ಲಿ ಬದಲಾವಣೆಗಳನ್ನು ತಂದಿದ್ದು, ವಿಶ್ವಮಟ್ಟದಲ್ಲಿ ಗಮನ ಸೆಳೆದಿದ್ದು, ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು.
ಪ್ರಧಾನಿ ಅವರು ನರೇಂದ್ರಮೋದಿ ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸುತ್ತಿದ್ದು, ಅವರ ಕಾರ್ಯಸಾಧನೆಯನ್ನು ಇಡೀ ವಿಶ್ವವೇ ಮೆಚ್ಚುವಂತದ್ದು, ದೇಶದ ಅಭಿವೃದ್ಧಿಗೆ ಎಲ್ಲ ಆಯಾಮಗಳಲ್ಲೂ ದೊಡ್ಡ ಕೊಡುಗೆ ನೀಡಿರುವುದು ಜಗತ್ ಜಾಹೀರಾತು ಆಗಿದೆ. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರಗೆ ಒಂದು ತಿಂಗಳಕಾಲ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಿರಜನ್ ಕುಮಾರ್. ಮಾಜಿ ಜಿಲ್ಲಾಧ್ಯಕ್ಷ ಜಿ ನಾರಾಯಣ ಪ್ರಸಾದ್, ನಗರಸಭೆ ಮಾಜಿ ಉಪಾಧ್ಯಕ್ಷ ಮಮತಾ ಬಾಲು ಸುಬ್ರಮಣ್ಯ ಮಾಜಿ ಸದಸ್ಯ ಚಂದ್ರಶೇಖರ್ ಎಸ್‌ಟಿ ಮೋರ್ಚಾದ ರಾಜ್ಯ ಉಪಾಧಕ್ಷ ಜಯಸುಂದರ್, ಮುಖಂಡ ಡಾ. ಎ.ಆರ್.ಬಾಬು, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಶಿಕ್ಷಕ ಮೋಹನ್. ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ ಬಿಜೆಪಿ ಜಿಲ್ಲಾ ಆರ್.ಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಸುಂದರ್‌ರಾಜ್, ನಗರಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಭಾಸ್ಕರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋ
ತ್ತಮ, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಮುಖಂಡರಾದ ನಟರಾಜು, ಮೂಡ್ಲುಪುರ ನಂದೀಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆನಂದ್‌ಭಗೀರಥ, ನಗರ ಮಂಡಲ ಕಾರ್ಯದರ್ಶಿ ಬಂಗಾರನಾಯಕ, ನಗರಸಭಾ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ಎಂ.ಎಸ್.ಚಂದ್ರಶೇಖರ್, ಸುಂದರಪ್ಪ, ಮಹೇಶ್‌ಪಟೇಲ್, ಕೃಷ್ಣ ಇತರರು ಹಾಜರಿದ್ದರು
