ಚಾಮರಾಜನಗರ: ಜ್ಞಾನ ಭಾರತಂ ಮಿಷನ್ ಯೋಜನೆಯಡಿಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಭಾರತದ ಜ್ಞಾನ ಸಂಪತ್ತನ್ನು ಮುಂದಿನ ತಲೆಮಾರಿಗೆ ತಲುಪಿಸುವ ಉದ್ದೇಶದಿಂದ ರಾಷ್ಟ್ರಾದ್ಯಂತ ಇರುವ ಹಸ್ತಪ್ರತಿಗಳನ್ನು ಸಂರಕ್ಷಿಸುವ ಉದ್ದೇಶದೊಂದಿಗೆ ಹಸ್ತಪ್ರತಿಗಳ ಸಮೀಕ್ಷೆ ಕಾರ್ಯ ಜಿಲ್ಲೆಯಲ್ಲಿ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಇದಕ್ಕಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಹಸ್ತಪ್ರತಿಗಳ ಸಮೀಕ್ಷಾ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜ್ಞಾನ ಭಾರತಂ ಯೋಜನೆಯಡಿಯಲ್ಲಿ ದೇಶಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು, ದಾಖಲೆಗಳ ಸಮೀಕ್ಷೆಯನ್ನು ಕೈಗೊಂಡು ಇವುಗಳನ್ನು ಇಂದಿನ ತಂತ್ರಜ್ಞಾನದ ಮೂಲಕ ಶಾಶ್ವತವಾಗಿ ಉಳಿಸಲಾಗುತ್ತದೆ. ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ಡಿಜಟಲೀಕರಣ, ನೊಂದಣಿ, ವಿಮರ್ಶಾತ್ಮಾಕ ಸಂಪಾದನೆ, ಅನುವಾದ ಮತ್ತು ಪ್ರಕಟಣೆಯನ್ನು ಮಾಡುವ ಮೂಲಕ ಶ್ರೀಮಂತ ಸಾಂಸ್ಕøತಿಕ ಪರಂಪರೆಯನ್ನು ಒಂದೇ ವೇದಿಕೆ ಮೂಲಕ ಸಾರ್ವಜನಿಕ ಪ್ರವೇಶವನ್ನು ಒದಗಿಸಲಾಗುತ್ತದೆ ಎಂದರು.
ತಾಳೆಗರಿ, ಹಳೆಯ ಹಸ್ತಪ್ರತಿಗಳು, ಇತರೆ ರೂಪಗಳಲ್ಲಿ ಬರೆಯಲ್ಪಟ್ಟ ಪ್ರಾಚೀನ ವಿಜ್ಞಾನ, ಸಾಹಿತ್ಯ, ವೈದ್ಯಕೀಯ ಹಾಗೂ ಧಾರ್ಮಿಕ ಜ್ಞಾನ ಸಂಗ್ರಹಗೊಂಡಿದೆ. ಇವುಗಳ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹಸ್ತಪ್ರತಿಗಳು ನಮ್ಮ ದೇಶದ ಸಂಸ್ಕøತಿ, ಪರಂಪರೆ ಮತ್ತು ಜ್ಞಾನ ಸಂಪತ್ತಿನ ಅಮೂಲ್ಯ ಭಾಗವಾಗಿದೆ. ಭವಿಷ್ಯದ ಪೀಳಿಗೆಗೆ ಅವುಗಳ ಜ್ಞಾನ ಸಂಪತ್ತಿನ ಸಂರಕ್ಷಣೆ ಮತ್ತು ಬಳಕೆ ಮಾಡುವುದು ರಾಷ್ಟ್ರೀಯ ಹಸ್ತಪ್ರತಿ ಸಮೀಕ್ಷೆಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಹಸ್ತಪ್ರತಿಗಳ ಸಮೀಕ್ಷೆಯನ್ನು ವ್ಯವಸ್ಥಿತ ಹಾಗೂ ಸಮಯೋಚಿತವಾಗಿ ಕೈಗೊಳ್ಳಬೇಕಿದೆ. ಸಾಂಸ್ಥಿಕ ಭಂಡಾರಗಳು, ದೇವಾಲಯಗಳು, ಮಠ ಮಾನ್ಯಗಳು, ಗ್ರಂಥಾಲಯಗಳು, ಆಶ್ರಮಗಳು, ಖಾಸಗಿ ವ್ಯಕ್ತಿಗಳು ಸಂಗ್ರಹಕಾರರನ್ನು ಗುರುತಿಸಬೇಕು. ಇವರಲ್ಲಿ ಇರಬಹುದಾದ ಹಸ್ತಪ್ರತಿಗಳ ಮಾಹಿತಿ ಪಡೆದು ಸಮೀಕ್ಷೆ ನಡೆಸಬೇಕು ಎಂದು ಹೇಳಿದರು.
ಸಂಘ ಸಂಸ್ಥೆಗಳು, ಮಠಗಳು, ವಿಶ್ವ ವಿದ್ಯಾನಿಲಯಗಳು, ವ್ಯಕ್ತಿಗಳು, ಯಾರ ಬಳಿಯಾದರೂ ನೊಂದಣಿ ಮಾಡದ ಅಥವಾ ಪಟ್ಟಿ ಮಾಡದ ಹಸ್ತಪ್ರತಿಗಳ ಸಂಗ್ರಹ ಇದ್ದರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಹಸ್ತಪ್ರತಿಗಳ ಕುರಿತು ಮಾಹಿತಿ ಇದ್ದರೆ ಹಸ್ತಪ್ರತಿ ಸಮೀಕ್ಷೆಯಲ್ಲಿ ಭಾಗವಹಿಸಬಹುದು. ಹಸ್ತಪ್ರತಿಗಳ ಬಗ್ಗೆ ಮಾಹಿತಿ ಇದ್ದಲ್ಲಿ ಸಂಬಂಧಪಟ್ಟವರು ತಿಳಿಸಬೇಕು. ಹಸ್ತಪ್ರತಿಗಳು ಹಾನಿಯಾಗದಂತೆ ಸುರಕ್ಷಿತವಾಗಿ ಕಾಯ್ದುಕೊಳ್ಳಬೇಕು. ಜ್ಞಾನ ಭಾರತಂ ಆಪ್ ಡೌನ್ ಲೋಡ್ ಮಾಡಿಕೊಂಡು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು. gಥಿಟಿಚಿbhಚಿಡಿಚಿಣhಚಿm.ಛಿom ಮೂಲಕ ಆನ್ ಲೈನ್ ನಲ್ಲೂ ಭರ್ತಿ ಮಾಡಿ ಸಮೀಕ್ಷೆಯಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಹಸ್ತಪ್ರತಿಗಳ ಸಮೀಕ್ಷೆ ಬಗ್ಗೆ ಯಾರಿಗೂ ಆತಂಕ ಅಥವಾ ಹಿಂಜರಿಕೆ ಬೇಡ. ಹಸ್ತಪ್ರತಿಗಳ ಮಾಹಿಯನ್ನು ಸಂಗ್ರಹಿಸಿ ಡಿಜಿಟಲ್ ರೂಪದಲ್ಲಿ ಉಳಿಸಿ ಭವಿಷ್ಯದ ಪೀಳಿಗೆಗೆ ಜ್ಞಾನ ಸಂಪತ್ತಾಗಿ ಉಳಿಸಿ ಸಂರಕ್ಷಿಸುವುದು ಮಾತ್ರ ಹಸ್ತಪ್ರತಿ ಸಮೀಕ್ಷೆಯ ಉದ್ದೇಶವಾಗಿದೆ. ಈ ಸಮೀಕ್ಷೆಗೆ ಸಕ್ರಿಯ ಸಹಕಾರ ನೀಡಿ ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕರಾದ ಡಾ. ಮಂಜುಳಾ, ಸಹಾಯಕ ನಿರ್ದೇಶಕರಾದ ಎಂ. ಸುನೀಲ್ ಕುಮಾರ್, ತಹಶೀಲ್ದಾರರಾದ ಗಿರಿಜಾ, ನಯನ, ಬಸವರಾಜು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ತಮನ್ ಗೌಡ ಪಾಟಿಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ರಾಜು, ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಉಪಕಾರ್ಯದರ್ಶಿ ಚಂದ್ರಶೇಖರ್, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related