ಕರ್ತವ್ಯ ಲೋಪ : ಪಿಡಿಓ ಅಮಾನತು

ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಯಳಂದೂರು ತಾಲೂಕಿನ ಯರಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ. ಶಿವಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಆದೇಶಿಸಿದ್ದಾರೆ. 

  ಪಂಚಾಯತ್ ಅಭಿವೃದ್ದಿ ಅಧಿಕಾರಿಯಾದ ಡಿ. ಶಿವಕುಮಾರ್ ಅವರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಕರೆದು ಸಭೆಯಲ್ಲಿ ಚರ್ಚಿಸಿ ಸಭೆಯ ತೀರ್ಮಾನದ ರೀತ್ಯಾ ಕ್ರಮವಹಿಸದೇ ಏಕಪಕ್ಷೀಯವಾಗಿ ವರ್ತಿಸಿ ಗ್ರಾಮದಲ್ಲಿ ಕೋಮು ಗಲಭೆ ಉಂಟಾಗಲು ಕಾರಣವಾಗಿರುವುದು ಹಾಗೂ ಕಚೇರಿ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿರುವ ಸಂಬಂಧ ವರದಿ ಸಲ್ಲಿಕೆಯಾಗಿತ್ತು. 

  ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜರಿಗೆ ಬರುವಂತೆ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಡಿ. ಶಿವಕುಮಾರ್ ಅವರನ್ನು ಅಮಾನತು ಮಾಡಿರುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *