ನೂತನ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಸನ್ಮಾನ

  • ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕ್ಯಾಲೆಂಡರ್ ಬಿಡುಗಡೆ

ಚಾಮರಾಜನಗರ:  ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀರೂಪ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಸ್ವಾಗತಿಸಿ, ಸನ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸಿ.ಎನ್.ರೇಣುಕಾದೇವಿ ಅವರ ನೇತೃತ್ವದಲ್ಲಿ  ನೂತನ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು.

ಕ್ಯಾಲೆಂಡರ್ ಬಿಡುಗಡೆ : ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯು ಹೊರತಂದಿರುವ
2026 ನೇ ಸಾಲಿನ ವಾರ್ಷಿಕ ಕ್ಯಾಲೆಂಡರನ್ನು ನೂತನ ಜಿಲ್ಲಾಧಿಕಾರಿ ಶ್ರೀರೂಪ ಬಿಡುಗಡೆ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ  ಸಂಘದ  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್ ಭೂಷಣ್,   ಖಜಾಂಚಿ ಶಿವಕುಮಾರಯ್ಯ,ರಾಜ್ಯ ಪರಿಷತ್ ಸದಸ್ಯ ನಟರಾಜು, ಕಾರ್ಯಾಧ್ಯಕ್ಷ ಮಹಾದೇವಸ್ವಾಮಿ,  ಹಿರಿಯ ಉಪಾಧ್ಯಕ್ಷ ಎಂ.ಡಿ.ಮಹದೇವಯ್ಯ, ಉಪಾಧ್ಯಕ್ಷ ನಾರಾಯಣಸ್ವಾಮಿ,  ರವಿಕುಮಾರ್,
ಕೆ.ರಾಚಯ್ಯ,  ಸೋಮಶೇಖರ್ ಮಹೇಶ ಚಂದ್ರ,   ಸಿ.ಎಂ.ಮುರುಗೇಶ್ ಕುಮಾರ್, ರಾಜು ಎಸ್.ಜಿ, ಸಿ.ಕೆ.ವಾಸು ಇತರರು ಹಾಜರಿದ್ದರು.

Leave a Reply

Your email address will not be published. Required fields are marked *