ಬಿಸಲವಾಡಿ ಗ್ರಾಮದಲ್ಲಿ ನೂತನ ಶ್ರೀರಾಮ ಮಂದಿರ ಉದ್ಘಾಟನೆ

ಚಾಮರಾಜನಗರ: ತಾಲೂಕಿನ ಬಿಸಲವಾಡಿ ಗ್ರಾಮದ ಕುಂಬಾರ ಬೀದಿಯಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀರಾಮ ಮಂದಿರದ ಪ್ರತಿಷ್ಠಾಪನಾ ಮಹೋತ್ಸವವು ಭಕ್ತಿಭಾವದಿಂದ ನಡೆಯಿತು.
ಈ ಸಂದರ್ಭದಲ್ಲಿ ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ನೂತನ ಶ್ರೀರಾಮ ಮಂದಿರವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸಚಿವ ಸಿ. ಪುಟ್ಟರಂಗಶೆಟ್ಟಿ, ಶ್ರೀರಾಮನ ಹೆಸರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಂದಿರವನ್ನು ಉದ್ಘಾಟಿಸಿರುವುದು ಸಂತಸ ತಂದಿದೆ. ಶ್ರೀರಾಮನು ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ, ನೆಮ್ಮದಿ ಹಾಗೂ ಸುಖ-ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.
ರಾಜ್ಯ ಹಾಗೂ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಉತ್ತಮ ಮಳೆಯಾಗಿ, ರೈತರಿಗೆ ಉತ್ತಮ ಬೆಳೆ ದೊರೆಯಲಿ. ಜನರು ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದು ಹೇಳಿದರು.
ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ದೇವಸ್ಥಾನಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ೫ ಕೋಟಿ ಅನುದಾನ ನೀಡಲಾಗಿದೆ. ಮಂಟೇಸ್ವಾಮಿ, ಸಿದ್ದಪ್ಪಾಜಿ, ಮಾರಮ್ಮ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ಕಲ್ಪಿಸಲಾಗಿದೆ ಎಂದರು.
ಅದೇ ರೀತಿ ಹರದನಹಳ್ಳಿಯ ದಿವ್ಯಲಿಂಗೇಶ್ವರಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ೩.೬೦ ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.
ಈವೇಳೆ ಮುಖಂಡರಾದ ಪಿ,ಎಲ್,ಡಿ,ಬ್ಯಾಂಕ್ ನಿರ್ದೇಶಕ ರವಿ, ಮಹದೇವಪ್ಪ ಶೇಖರ್, ನಂದೇಶ್, ಸಿದ್ದಮಲ್ಲು, ಶಿವಸ್ವಾಮಿ, ನಾರಾಯಣನಾಯಕ, ಬಿಸಲವಡಿ ಎಸ್,ಉಮೇ±ಗೌಡï, ಸೇರಿದಂತೆ ಬಿಸಲವಾಡಿಗ್ರಾಮದ ಸಮುದಾಯಗಳ Àಮುಖಂಡರು ಅರ್ಚಕರಾದ ರಂಗಪ್ಪ, ಸಮಿತಿಯ ಸದಸ್ಯರು ಕುಂಬರ ಜನಾಂಗದ ಯಜಮಾನರು ಹಾಗೂ ಗ್ರಾಮಸ್ಥರು, ಭಾಗವಹಿಸಿದ್ದರು.

Leave a Reply

Your email address will not be published. Required fields are marked *