ಆ.20ರಂದು ಮಾಜಿ ಶಾಸಕ ಎಂ.ಸಿ.ಬಸಪ್ಪ ಸಮಾಜಸೇವಾ ಪ್ರಶಸ್ತಿ, ದತ್ತಿ ಕಾರ್ಯಕ್ರಮ


ಚಾಮರಾಜನಗರ : ಮಾಜಿ ಶಾಸಕ ಎಂ.ಸಿ.ಬಸಪ್ಪ ಸಮಾಜಸೇವಾ ಪ್ರಶಸ್ತಿ ಪ್ರದಾನ ಹಾಗೂ ದತ್ತಿ ಕಾರ್ಯಕ್ರಮವನ್ನು ಆ.20ರ ಗುರುವಾರ ಜೆಎಸ್‍ಎಸ್ ಮಹಿಳಾ ಕಾಲೇಜಿನಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ತಿಳಿಸಿದರು.
ನಗರದ ಪತ್ರಕರ್ತರ ಭನವದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸುತ್ತೂರು ಶ್ರೀಗಳಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದು, ದಿವ್ಯ ಸಮ್ಮುಖವನ್ನು ಪಡಗೂರು ಅಡವಿಮಠದ ಶ್ರೀ ಶಿವಲಿಂಗೇಂದ್ರಸ್ವಾಮಿಗಳು, ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳಾದ ಶ್ರೀರೂಪಾ ನೆರವೇರಲಿದ್ದು, ಅಧ್ಯಕ್ಷತೆಯನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತುವಿನ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರು ವಹಿಸಲಿದ್ದಾರೆ ಎಂದರು.
ಮಾಜಿ ಶಾಸಕ ಎಂ.ಸಿ.ಬಸಪ್ಪನವರ ರಾಜಕಾರಣ ಮತ್ತು ಸಮಾಜಸೇವೆಗೆ ಸಂಬಂಧಿಸಿದಂತೆ ವಿಶ್ರಾಂತ ಪ್ರಾಧ್ಯಾಪಕರು ಹಾಗೂ ಸಾಹಿತಿಗಳಾದ ಚಂದ್ರಶೇಖರಯ್ಯ ಅವರಿ ಉಪನ್ಯಾಸ ಮಾಡಲಿದ್ದಾರೆ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ದುಗ್ಗಹಟ್ಟಿ ವಿ.ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಕೆ.ರವಿಕುಮಾರ್ ಉಪಸ್ಥಿತರಿರುವರು ಎಂದರು.
ಪರಿಸರವಾದಿ ಹಾಗೂ ಸಮಾಜಸೇವಕರಾದ ಪುಣಜನೂರು ದೊರೆಸ್ವಾಮಿ ಅವರಿಗೆ ಮಾಜಿ ಶಾಸಕ ಎಂ.ಸಿ.ಬಸಪ್ಪ ಸಮಾಜಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದು, ವಿದ್ಯಾರ್ಥಿಗಳಾದ ನಾಗದೇವ್ ಎಂ.ಜಿ., ಚಂದನ್.ಪಿ., ಮನೋಜ್.ಎ. ಅವರಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರದ ಪೇಟೆ ಶಾಲೆಯ 210 ವಿದ್ಯಾರ್ಥಿಗಳಿಗೆ  ಸಮವಸ್ತ್ರವನ್ನು ಉಚಿತವಾಗಿ ವಿತರಣೆ ಮಾಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸುಂದರ್, ಲಿಂಗರಾಜು, ತಾಲೂಕು ಅಧ್ಯಕ್ಷ ಯೋಗೇಶ್ ಇದ್ದರು.

Leave a Reply

Your email address will not be published. Required fields are marked *