ಆಗಸ್ಟ್ 6ರಂದು ಸಚಿವ ಸಿ. ಪುಟ್ಟರಂಗಶೆಟ್ಟಿ ಗುಂಡ್ಲುಪೇಟೆ ಪ್ರವಾಸ : ಬರ, ಅತಿವೃಷ್ಠಿ ಪರಿಶೀಲನೆ

ಚಾಮರಾಜನಗರ: ಸಂಪುಟ ದರ್ಜೆ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಆಗಸ್ಟ್ 6ರಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬರ, ಅತಿವೃಷ್ಠಿ ಸಂಬಂಧ ಜಿಲ್ಲಾ ಹಾಗೂ ತಾಲೂಕು ಆಡಳಿತ ಮತ್ತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಪ್ರವಾಸ ಕೈಗೊಂಡಿದ್ದಾರೆ.

ಆಗಸ್ಟ್ 6ರಂದು ಬೆಳಿಗ್ಗೆ 8 ಗಂಟೆಗೆ ಚಾಮರಾಜನಗರ ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸುವರು. 8.30 ಗಂಟೆಗೆ ಚಾಮರಾಜನಗರ ತಾಲೂಕಿನ ಹರವೆ ಗ್ರಾಮ, 9 ಗಂಟೆಗೆ ಮಲೆಯೂರು ಗ್ರಾಮಕ್ಕೆ ಭೇಟಿ ನೀಡುವರು. 10 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ಸೀಗೇವಾಡಿ ಗ್ರಾಮ, 10.30 ಗಂಟೆಗೆ ನಿಟ್ರೆ ಗ್ರಾಮ, 11.30 ಗಂಟೆಗೆ ಪರಮಾಪುರ ಗ್ರಾಮ, 12 ಗಂಟೆಗೆ ಬಲಚವಾಡಿ ಗ್ರಾಮಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ಗುಂಡ್ಲುಪೇಟೆಯ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಮಧ್ಯಾಹ್ನ 2 ಗಂಟೆಗೆ ಗುಂಡ್ಲುಪೇಟೆ ತಹಶೀಲ್ದಾರ್ ಕಚೇರಿಯಲ್ಲಿ ತಾಲೂಕುಮಟ್ಟದ ಅಧಿಕಾರಿಗಳ ಸಭೆ ನಡೆಸುವರು ಎಂದು ಸಚಿವರ ಅಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *