ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬAಧಿತ ಇಲಾಖೆ ವತಿಯಿಂದ ಚಾಮರಾಜನಗರ ದಸರಾ ಮಹೋತ್ಸವ ಅಂಗವಾಗಿ ಅಕ್ಟೋಬರ್ 16ರಂದು ರೈತ ದಸರಾ, ಫಲಪುಷ್ಪ ಪ್ರದರ್ಶನ, ಶ್ವಾನದಳ ಪ್ರದರ್ಶನ, ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶ್ವಾನಗಳ ಪ್ರದರ್ಶನವನ್ನು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸುವರು. 11.45 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರೈತ ದಸರಾದ ವೇದಿಕೆ ಕಾರ್ಯಕ್ರಮ ಹಾಗೂ ರಾಶಿ ಪೂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ರೈತ ದಸರಾ ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಬೆಳಿಗ್ಗೆ 11.30 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಒಳ ಆವರಣದಲ್ಲಿ ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು.
ಬೆಳಿಗ್ಗೆ 11 ಗಂಟೆಗೆ ಚಾಮರಾಜೇಶ್ವರ ದೇವಸ್ಥಾನದ ಬಳಿ ರೈತ ದಸರಾ ಮೆರವಣಿಗೆಗೆ ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಚಾಲನೆ ನೀಡುವರು. ಸಂಜೆ 5 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಬಹುಮಾನ ವಿತರಿಸುವರು.
ಕಾರ್ಯಕ್ರಮದಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ (ಮುನ್ನ) ಅವರು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಚಿಕ್ಕಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Related