ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನಿಮ್ಮ ಮನೆಯಲ್ಲೆ ಕುಳಿತು ಇ-ಖಾತಾವನ್ನು ಪಡೆದುಕೊಳ್ಳಿ ಅಭಿಯಾನ ಪ್ರಾರಂಭಿಸಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ.
ಚಾಮರಾಜನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು, ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಯಲ್ಲಿಯೇ ಕುಳಿತು ಇ-ಖಾತಾ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.
ಆಸ್ತಿ ಕಣಜದಲ್ಲಿನ ಮಾಹಿತಿ ಅಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರು ಈ ಮಾಹಿತಿಗಳನ್ನು ನೇರವಾಗಿ ವೀಕ್ಷಿಸಬಹುದು. ಸದರಿ ಮಾಹಿತಿಗಳ ಬಗ್ಗೆ ತಕರಾರಿದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದು. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರ ಸ್ಥಳೀಯ ಸಂಸ್ಥೆಗಳು ಪರಿಶೀಲಿಸಿ, ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲೇ ಕುಳಿತು ಪಡೆಯಬಹುದು.
ಸಾರ್ವಜನಿಕರು ಈ ಖಾತಾ ಪಡೆಯಲು ಮಾಲೀಕರ ಭಾವಚಿತ್ರ ಮತ್ತು ಆಧಾರ್, ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ, ಸ್ವತ್ತಿನ ಕ್ರಯ/ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಂಶದಿಂದ ವಿದ್ಯುನ್ಮಾನÀವಾಗಿ ಪಡೆದುಕೊಳ್ಳುತ್ತದೆ), ವಿದ್ಯುತ್ ಆರ್.ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ), ಸ್ವತ್ತಿನ ಛಾಯಾಚಿತ್ರ, ಇ.ಸಿ ನಮೂನೆ 15/16 ಹಾಗೂ ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು ಅಗತ್ಯವಿದೆ.
ಮನೆಯಲ್ಲೇ ಕುಳಿತು ಅತಿ ಸರಳವಾಗಿ ಈ ಸೇವೆಯನ್ನು ಪಡೆಯಬಹುದು. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನಿಗದಿತ ಕಾಲಾವಧಿಯೊಳಗಾಗಿ ಇ-ಖಾತಾ ಪಡೆಯಬಹುದಾಗಿದೆ. ಕೆ-1 ಕೇಂದ್ರಗಳಲ್ಲೂ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಇ-ಖಾತಾ ಪಡೆಯುವ ಮೂಲಕ ಸರಳವಾಗಿ ಆಸ್ತಿ ತೆರಿಗೆಯನ್ನು ಆನ್ ಲೈನ್ ಮೂಲಕ ಪಾವತಿಸಬಹುದು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಇ-ಖಾತಾ ಪಡೆದುಕೊಳ್ಳುವ ಅಭಿಯಾದ ಅನುಕೂಲವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 7259585959 ಅಥವಾ ವೆಬ್ ಸೈಟ್ ತಿತಿತಿ.eಚಿಚಿsಣhi.ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸುವಂತೆ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಸುಧಾ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
Like this:
Like Loading...
Related