ಶ್ರೀಭಗೀರಥ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ
ಚಾಮರಾಜನಗರ: ಉಪ್ಪಾರ ಅಭಿವೃದ್ಧಿ ನಿಮಗಕ್ಕೆ ಪ್ರತಿ ವರ್ಷ ಬಜೆಟ್‌ನಲ್ಲಿ 500 ಕೋಟಿ ರೂ. ಮೀಸಲಿಡಬೇಕು ಎಂದು ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಪಿ.ಲಿಂಗರಾಜು ಒತ್ತಾಯಿಸಿದರು.
ನಗರದ ಚೆನ್ನೀಪುರದಮೋಳೆಯಲ್ಲಿ ಶ್ರೀಭಗೀರಥ ಸೇವಾ ಟ್ರಸ್ಟ್ ವತಿಯಿಂದ ನಡೆದ ಶ್ರೀಭಗೀರಥ. ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಮುಖ್ಯಮಂತ್ರಿಗಳು ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಿರಿ. ನಿಗಮಕ್ಕೆ ನೀವು ನೀಡುವ ಅನುದಾನ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ಯಾವುದಕ್ಕೂ ಸಾಲುತ್ತಿಲ್ಲ. ಅದೊಂದು ನಾಮಾಕಾವಸ್ಥೆಯ ನಿಗಮವಾಗಿದೆ. ನಿಗಮಕ್ಕೆ ವಾರ್ಷಿಕ 500 ಕೋಟಿ ರೂ ಮೀಸಲಿಡಬೇಕು ಎಂದು ಆಗ್ರಹಿಸಿದರು.
ಶ್ರೀಮಹರ್ಷಿ ಭಗೀರಥರು ಕಠಿಣ ತಪಸ್ಸು ಮಾಡುವ ಮೂಲಕ ತನ್ನ ಪೂರ್ವಜರಿಗೆ ಮುಕ್ತಿ ಕೊಡಿಸಲು ದೇವಲೋಕದಲ್ಲಿದ್ದ ಗಂಗೆಯನ್ನು ಭೂಮಿಗೆ’ ತಂದ ಮಹಾಸಂತರು ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳೋಣ. ಎಂದರು.
ಉಪ್ಪಾರ ಸಮುದಾಯ ರಾಜ್ಯದಲ್ಲಿ ಸುಮಾರು 30 ರಿಂದ 40 ಲಕ್ಷ ಜನಸಂಖ್ಯೆ ಹೊಂದಿದ್ದು, ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಸಮುದಾಯ ಹಿಂದುಳಿದ್ದು, ಸರ್ಕಾರದಿಂದ ಬರುವ ಸೌಲಭ್ಯಗಳು ಮರೀಚಿಕೆಯಾಗಿದೆ. ತೀವ್ರ ಹಿಂದುಳಿದ ಈ ಸಮುದಾಯಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು. ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.
ರಾಜ್ಯದ 224 ಕ್ಷೇತ್ರಗಳಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸಿ. ಪುಟ್ಟರಂಗಶೆಟ್ಟಿ ಒಬ್ಬರೆ ಏಕೈಕ ಶಾಸಕರಾಗಿದ್ದಾರೆ. ಮುಂದಿನ ದಿನಗಳಲ್ಲಿ ಉಪ್ಪಾರ ಸಮುದಾಯ ಹೆಚ್ಚಾಗಿರುವ ಕಡೆಯಲ್ಲಿ ಮತೊಬ್ಬರಿಗೆ ಟಿಕೆಟ್ ನೀಡಬೇಕು. ಅಲ್ಲದೆ ಒಬ್ಬರನ್ನು ವಿಧಾನಸಭಾ ಸದಸ್ಯರಾಗಿ ನೇಮಕ ಮಾಡುವ ಮೂಲಕ ಸಮಾಜಕ್ಕೆ ರಾಜಕೀಯ ಶಕ್ತಿ ತುಂಬಬೇಕು. ಜಿಲ್ಲೆಯಲ್ಲಿ ಉಪ್ಪಾರ ಸಮುದಾಯ ವಾಸಿಸುವ ಮೋಳೆಗಳ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಭಗೀರಥ ಸೇವಾ ಟ್ರಸ್ಟ್ ಕಾರ್ಯದರ್ಶಿ ವಕೀಲ ರಂಗಸ್ವಾಮಿ, ನಿರ್ದೇಶಕರಾದ ನಾಗರಾಜು, ಮಹದೇವಶೆಟ್ಟಿ, ಶ್ರೀನಿವಾಸ, ರಾಜು, ಮಹದೇವಶೆಟ್ಟಿ, ಬಂಡಿಗೆರೆ ಕುಮಾರ್, ಚೆನ್ನಿಗ,ರಾಕೇಶ್, ಕೃಷ್ಣ ಹಾಜರಿದ್ದರು.