ಹರದನಹಳ್ಳಿ ಹೋಬಳಿಯಲ್ಲಿ ಕಂದಾಯ ಮತ್ತು ಪಿಂಚಣಿ ಅದಾಲತ್

ಚಾಮರಾಜನಗರ: ಸಮೀಪದ ಹರದನಹಳ್ಳಿ ಗ್ರಾಮದ ನಾಡ ಕಚೇರಿಯಲ್ಲಿ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಯಿತು. ತಹಸೀಲ್ದಾರ್ ಐ.ಈ.ಬಸವರಾಜು ಅವರ ಅಧ್ಯಕ್ಷತೆಯಲ್ಲಿ…

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ಪ್ರಗತಿ ಪರಿಶೀಲನೆ

ಅಂತರ್ಜಲ ಮಟ್ಟವನ್ನು ಅಭಿವೃದ್ಧಿ ಪಡಿಸಿ, ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮವಹಿಸಿ – ಪ್ರಿಯಾಂಕ ಖರ್ಗೆ ಮೈಸೂರು:ಮೈಸೂರು ಜಿಲ್ಲೆಯಲ್ಲಿ ಕಾವೇರಿ, ಕಪಿಲಾ ನದಿಗಳು ಹರಿಯುವ ಜಿಲ್ಲೆಯಾಗಿದ್ದು ಇಲ್ಲಿ ನೀರಿನ ಲಭ್ಯತೆ ಹೆಚ್ಚಿದೆ. ಸಿಗುವ ನೀರನ್ನು ಇಂಗಿಸುವ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ಅಭಿವೃದ್ಧಿ ಪಡಿಸಿ, ಇದರಿಂದ ಕುಡಿಯುವ ನೀರಿನ ಕೊರತೆ ಆಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಬರ ಇದೆ. ಕುಡಿಯುವ ನೀರಿಗೆ ಪ್ರಥಮ ಆಧ್ಯತೆ ನೀಡಬೇಕು. ಮುಂದಿನ 6 ತಿಂಗಳುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸಿ, ಕುಡಿಯುವ ನೀರು ಪೂರೈಸುವ ಕ್ರಮಗಳನ್ನು ಗುರುತಿಸಿಕೊಳ್ಳಿ. ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸುವ ಮುನ್ನ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ನರೇಗಾ ಅಡಿ ಮಾನವ ದಿನಗಳ ಸೃಜನೆಯಲ್ಲಿ ಟಿ ನರಸೀಪುರ ನಂಜನಗೂಡು ಹಾಗೂ ಪಿರಿಯಾಪಟ್ಟಣ ತಾಲ್ಲೂಕುಗಳು 50% ಗಿಂತ ಕಡಿಮೆ ಇದೆ. ಈ ಬಾರಿ ಎಲ್ಲಾ ಕಡೆ ಬರ ಇದೆ. ಬರ ಇರುವುದರಿಂದ ನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳ ಕೆಲಸ ಆಗಬೇಕಿತ್ತು. ರಾಜ್ಯದಲ್ಲಿ 13 ಕೋಟಿ ಮಾನವ ದಿನಗಳ ಗುರಿ ಇತ್ತು ಇದರಲ್ಲಿ 10 ಕೋಟಿ ಮಾನವ ದಿನಗಳ ಗುರಿ ಸಾಧಿಸಿದ್ದೇವೆ. ಆದರೆ ಜಿಲ್ಲೆಯಲ್ಲಿ ಪ್ರಗತಿ ಉತ್ತಮವಾಗಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು. ಮೈಸೂರು ಜಿಲ್ಲೆಯಲ್ಲಿ 34 ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದೆ. ಆರ್ಥಿಕ ವರ್ಷದ ಅಂತ್ಯದೊಳಗೆ ಈ ಗುರಿ ಸಾಧಿಸಬೇಕು. ನಂಜನಗೂಡು, ಚಾಮುಂಡಿ ಬೆಟ್ಟದ ವ್ಯಾಪ್ತಿ ಹಾಗೂ ಜಿಲ್ಲೆಯ ಇತರೆ ಕಡೆ ಸೈಕಲ್ ಅಗರಬತ್ತಿ ಅವರೊಂದಿಗೆ ಎನ್.ಆರ್.ಎಲ್.ಎಂ ಯೋಜನೆಯಡಿ ಟೈ-ಅಪ್ ಆಗಿ ಗುಡಿ ಕೈಗಾರಿಕೆಗಳನ್ನು ಉತ್ತೇಜಿಸುವ ಯೋಜನೆಗಳನ್ನು ರೂಪಿಸಲಾಗುವುದು. ಮೈಸೂರು ಜಿಲ್ಲೆ ಪ್ರವಾಸಿ ತಾಣಗಳನ್ನು ಹೆಚ್ಚು ಹೊಂದಿದ್ದು, ಇಲ್ಲಿ ಇರುವ ಪುರಾತನ ಕಲ್ಯಾಣಿ ಗಳನ್ನು ನರೇಗಾ ಯೋಜನೆಯಡಿ ಸ್ವಚ್ಛಗೊಳಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿಗಳಲ್ಲಿ ಅಕ್ರಮಗಳು ಆಗಿರುವ ಕುರಿತು ಸೋಷಿಯಲ್ ಆಡಿಟ್ ನಲ್ಲಿ ರಿಕವರಿಗೆ ಬರೆದಿರುವ ಮೊತ್ತವನ್ನು ಸಂಬ0ದಿಸಿದ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಬ್ಯಾಂಬೋ ಕಲ್ಟಿವೇಶನ್ ಅನ್ನು ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ, ಹುಣಸೂರು, ಪಿರಿಯಾಪಟ್ಟಣ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ಮಾಡಲು ಅವಕಾಶವಿದೆ. ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಶೇಕಡಾ 20 ರಷ್ಟು ಕಾಮಗಾರಿಗಳು ಬಾಕಿ ಇಳಿದಿವೆ. ಇವುಗಳನ್ನು ಪೂರ್ಣಗೊಳಿಸಲು ಸಂಬAದಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಏಕ ಗ್ರಾಮ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಹಂತ 1 ರಿಂದ 4 ಹಂತಗಳ ಕಾಮಗಾರಿಗಳು ಬಾಕಿ ಉಳಿದಿವೆ. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಲ್ಲಿ ಕಾಮಗಾರಿಗಳನ್ನು ಮುಗಿಸದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯು ಸಮರ್ಪಕವಾಗಿ ಆಗಿಲ್ಲ. ತೆರಿಗೆ ವಸೂಲಾತಿಯಲ್ಲಿ ನಿಗದಿತ ಗುರಿ ಮುಟ್ಟಿಲ್ಲ. ಇದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಗಳ ಸಂಬಳ ನೀಡಲು ಕೊರತೆ ಉಂಟಾಗುತ್ತಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿ ತೆರಿಗೆ ವಸೂಲಾತಿ ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು. ಸಾರ್ವಜನಿಕರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳ ವಿರುದ್ಧ ದೂರು ಬಂದಾಗ ಪರಿಶೀಲನೆ ನಡೆಸಬೇಕು. ನವೆಂಬರ್ 20 ರೊಳಗೆ ಇಲಾಖಾ ವಿಚಾರಣೆ ಪ್ರಕರಣಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. 15 ನೆ ಹಣಕಾಸು ಯೋಜನೆಯಡಿ ಜಿಲ್ಲೆಯಲ್ಲಿ 78 ಕೋಟಿ ಬಳಕೆಯಾಗದ ಅನುದಾನ ಬಾಕಿ ಉಳಿದಿದೆ. ಶಾಸಕರ ಗಮನಕ್ಕೆ ತಂದು ಈ ಹಣವನ್ನು ಅಗತ್ಯವಾದ ಕಾಮಗಾರಿಗಳಿಗೆ ಬಳಕೆ ಮಾಡುವಂತೆ ಸೂಚನೆ ನೀಡಿದರು. ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಇ-ಅಟೆಂಡೆನ್ಸ್ ಹಾಕಬೇಕು ಎಂದು ಸೂಚನೆ ನೀಡಿದರು. ಹೆಚ್.ಡಿ ಕೋಟೆ ತಾಲ್ಲೂಕಿನ ಶಾಸಕರಾದ ಅನಿಲ್ ಕುಮಾರ್ ಅವರು ಮಾತನಾಡಿ ತಾಲ್ಲೂಕಿನಲ್ಲಿ ಹೆಚ್ಚಿನ ಅರಣ್ಯ ಪ್ರದೇಶ ಇದ್ದು ಇಲ್ಲಿ ಹಾಡಿ ಜನರು ಹೆಚ್ಚಾಗಿ ವಾಸಿಸುತ್ತಾರೆ. ಇಲ್ಲಿ ಜೇನು ಉತ್ಪಾದನೆ ಹೆಚ್ಚು ಇದ್ದು ಇವರು ಉತ್ಪಾದಿಸುವ ಜೇನು ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ವಿವಿಧ ಸಮುದಾಯಗಳ ಭವನಗಳು ಹೆಚ್ಚು ಉಪಯೋಗವಾಗುತ್ತಿಲ್ಲ. ಇವುಗಳನ್ನು ಪಂಚಾಯತ್‌ಗಳಿಗೆ ತೆಗೆದುಕೊಂಡು ಇಲ್ಲಿ ಗ್ರಂಥಾಲಯಗಳನ್ನು ತೆರೆಯಬಹುದಾಗಿದೆ ಎಂದು ಮನವಿ ಮಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ ಅವರು ಮಾತನಾಡಿ ನರೇಗಾ ಯೋಜನೆಯಲ್ಲಿ ರಾಯಲ್ಟಿ ಮೊತ್ತವನ್ನು ಕಾಮಗಾರಿ ಮುಗಿದ ಮೇಲೆ ಗುತ್ತಿಗೆದಾರರು ಪಾವತಿ ಮಾಡಬೇಕು. ಆದರೆ ಕೆಲವರು ಪಾವತಿ ಮಾಡದೇ ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರಾದ ಜಿ.ಡಿ ಹರೀಶ್ ಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಹರೀಶ್ ಗೌಡ ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ, ಮಂಜೇಗೌಡ ಅವರು ಉಪಸ್ಥಿತರಿದ್ದರು

ಭಾರತೀಯ ಯುವವಿಜ್ಞಾನಿಗಳು ಹಾಗೂ ಸಂಶೋಧಕರಿಗೆ ಹೆಚ್ಚಿನ ಅವಕಾಶ: ಎಮ್.ಡಿ.ರಂಗನಾಥ್

ಮೈಸೂರು: :“ಕ್ಲೌಡ್ ಕಂಪ್ಯೂಟಿಂಗ್ ಅತಿ ವೇಗದಲ್ಲಿ ಬೆಳೆಯುತ್ತಿರುವ ತಂತ್ರಜ್ಞಾನವಾಗಿದ್ದು, ಇಂದಿನ ಯುವ ಪೀಳಿಗೆಯ ವಿಜ್ಞಾನಿಗಳು ಹಾಗೂ ಸಂಶೋಧಕರಿಗೆ ವಿಪುಲ ಅವಕಾಶಗಳು ಲಭ್ಯವಾಗಲಿವೆ.…

ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೋಟ್ಪಾ ದಾಳಿ : 25,270 ರೂ. ದಂಡ ವಸೂಲಿ

ಚಾಮರಾಜನಗರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಕಣ್ಗಾವಲು ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ…

ಜನವನ ಸಾರಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಿಂದ ಚಾಲನೆ

ಚಾಮರಾಜನಗರ: ಹಾಡಿ, ಅರಣ್ಯ ಪ್ರದೇಶಗಳ ಜನರ ಓಡಾಟಕ್ಕೆ ಅನುಕೂಲ ಕಲ್ಪಿಸುವ ಜನವನ ಸಾರಿಗೆಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…

ಕೊಂಬುಡಿಕ್ಕಿ ಹಾಡಿಗೆ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭೇಟಿ : ಅಹವಾಲು ಆಲಿಕೆ

ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ…

ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ-ಪರಿಶೀಲನೆ

ಚಾಮರಾಜನಗರ: ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಇಂದು ಹನೂರು ತಾಲೂಕಿನ…

ಮಲೆ ಮಹದೇಶ್ವರ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.…

ಜಿಲ್ಲಾ ವ್ಯಾಪ್ತಿಯ ಕಾಡಂಚಿನ ಪ್ರದೇಶಗಳಿಗೆ ಹಗಲಿನ ವೇಳೆಯಲ್ಲಿ ವಿದ್ಯುತ್ ಸರಬರಾಜು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೂಚನೆ

ಚಾಮರಾಜನಗರ: ಜಿಲ್ಲಾ ವ್ಯಾಪ್ತಿಯಲ್ಲಿ ರೈತರಿಗೆ ಅನುಕೂಲವಾಗುವಂತೆ ಎಲ್ಲಾ ತಾಲೂಕುಗಳ ಅರಣ್ಯದಂಚಿನ ಪ್ರದೇಶಗಳಲ್ಲಿ ಬರುವ 98 ಫೀಢರ್‍ಗಳಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡಲು…

ನಗರದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ : ಅಕರ್ಷಕ ಪಥಸಂಚಲನ

ಚಾಮರಾಜನಗರ: ಕರ್ನಾಟಕ ಸಂಭ್ರಮ-50ರ ಅಂಗವಾಗಿ ನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳು…