ಡಿ. 9ರಂದು ಜಿಲ್ಲೆಯಾದ್ಯಂತ ಮೆಗಾ ಲೋಕ್ ಅದಾಲತ್

ಚಾಮರಾಜನಗರ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೆಶನದನ್ವಯ ಡಿಸೆಂಬರ್ 9ರಂದು ಚಾಮರಾಜನಗರ ಜಿಲ್ಲೆಯಾದ್ಯಂತ ಲೋಕ್ ಅದಾಲತ್ ಅನ್ನು ಏರ್ಪಡಿಸಲಾಗಿದೆ.…

ಅ. 28ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀ…

ನನ್ನ ಮಣ್ಣು-ನನ್ನ ದೇಶ ಅಮೃತ ಕಳಶ ಯಾತ್ರೆಗೆ ಶುಭ ಕೋರಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ನನ್ನ ಮಣ್ಣು ನನ್ನ ದೇಶ ಕುರಿತ ಅಮೃತ ಕಳಶ ಯಾತ್ರೆಯ ಅಂಗವಾಗಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಜಿಲ್ಲೆಯ ಐದು…

ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರಿಗೌಡ ಅವರ ಪ್ರತಿಮೆ ಅನಾವರಣ

ಮೈಸೂರು:ತೋಟಗಾರಿಕೆ ಪಿತಾಮಹ ಡಾ. ಎಂ.ಹೆಚ್. ಮರಿಗೌಡ ಅವರ ಪ್ರತಿಮೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಇಂದು ನಗರದ ಕರ್ಜನ್ ಪಾರ್ಕ್ ನಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಮೈಸೂರು ಹಾಗೂ ತೋಟಗಾರಿಕೆ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ತೋಟಗಾರಿಕಾ ಪಿತಾಮಹ ಡಾ. ಎಂ.ಹೆಚ್. ಮರಿಗೌಡರ ಪ್ರತಿಮೆ ಅನಾವರಣಗೊಳಿಸಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪ್ರತಿಮೆಯು 12 ಅಡಿ ಎತ್ತರವಿದ್ದು, ಒಂದು ಟನ್ ತೂಕದ ಕಂಚಿನ ಪ್ರತಿಮೆಯಾಗಿದೆ. ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ, ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್. ಮೈಸೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಶಿವಕುಮಾರ್, ಶಾಸಕರಾದ, ಕೆ ಹರೀಶ್ ಗೌಡ, ಡಿ ರವಿಶಂಕರ್, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಿ ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಡಾ. ಕೆ .ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳಿ0ದ ಲಿಂಗಾ0ಬುಧಿ ಸಸ್ಯ ಶಾಸ್ತ್ರೀಯ ತೋಟದ ಉದ್ಘಾಟನೆ

 ಮೈಸೂರು:ನಗರದ ರಾಮಕೃಷ್ಣ ನಗರದಲ್ಲಿ ತೋಟಗಾರಿಕೆ ಇಲಾಖೆಯ ಲಿಂಗಾ0ಬುಧಿ ಸಸ್ಯ ಶಾಸ್ತ್ರೀಯ ತೋಟವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಲಿಂಗಾoಬುಧಿ ಸಸ್ಯ ಶಾಸ್ತ್ರೀಯ ತೋಟವು 15 ಎಕರೆ ವಿಸ್ತೀರ್ಣವನ್ನು ಒಳಗೊಂಡಿದ್ದು, ಇದು 2012 ರಲ್ಲಿ ಆರಂಭಗೊ0ಡು 2023ರಲ್ಲಿ ಪೂರ್ಣಗೊಂಡಿತು. ತೋಟದ ಒಟ್ಟಾರೆ ಅಭಿವೃದ್ಧಿ ಮತ್ತು ನಿರ್ವಹಣೆ ವೆಚ್ಚ 5.60 ಕೋಟಿಗಳಾಗಿದ್ದು, ಒಟ್ಟು 290 ಸಸ್ಯ ಪ್ರಭೇದಗಳನ್ನು ಇಲ್ಲಿ ಕಾಣಬಹುದು. ಇಂದು ಲಾಲ್ ಬಾಗ್ ಅನ್ನು ಒಳಗೊಂಡ0ತೆ ತೋಟಗಾರಿಕೆ ಇಲಾಖೆಯು ಅಭಿವೃದ್ಧಿಪಡಿಸಿರುವ ಕರ್ನಾಟಕದ ನಾಲ್ಕನೇ ಸಸ್ಯ ಶಾಸ್ತ್ರೀಯ ತೋಟವಾಗಿದೆ. ಮೈಸೂರು ನಗರ ಮತ್ತು ಜಿಲ್ಲೆಯ ಪ್ರಪ್ರಥಮ ಸಸ್ಯ ಶಾಸ್ತ್ರೀಯ ತೋಟವೆಂಬ ಹೆಗ್ಗಳಿಕೆಯನ್ನು ಲಿಂಗಾoಬುದಿ ಸಸ್ಯ ಶಾಸ್ತ್ರಿಯ ತೋಟ ಪಡೆದುಕೊಂಡಿದೆ. ದೇಶ ವಿದೇಶದ ಸಸ್ಯ ಪ್ರಭೇದಗಳ ಪರಿಚಯ ಸ್ಥಳೀಯ ವಾತಾವರಣಕ್ಕೆ ಒಗ್ಗಿಸುವಿಕೆ, ಸಂರಕ್ಷಣೆ, ಸಸ್ಯಾಭಿವೃದ್ಧಿ ಮತ್ತು ಪ್ರಸರಣ ಕೈಗೊಳ್ಳುವುದು. ಸ್ಥಳೀಯ ಸಸ್ಯ ಪ್ರಭೇದಗಳು, ಅಪರೂಪದ ಅಳಿವಿನಂಚಿನಲ್ಲಿರುವ ಹಾಗೂ ವಿನಾಶದ ಅಂಚಿನಲ್ಲಿರುವ ಸಸ್ಯ ಪ್ರಭೇದಗಳ ಪರಿಚಯ, ಸಂರಕ್ಷಣೆ ಮತ್ತು ಸಸ್ಯಾಭಿವೃದ್ಧಿಗೆ ವಿಶೇಷ ಒತ್ತು ನೀಡುವುದು. ಸಸ್ಯ ಸಂರಕ್ಷಣೆಯ ಜೊತೆ ಜೊತೆಗೆ ಪ್ರಾಣಿ ಮತ್ತು ಪಕ್ಷಿ ಸಂಕುಲಕ್ಕೆ ವಿಶೇಷ ಒತ್ತು ನೀಡುವುದು. ವಿವಿಧ ಸಸ್ಯ ಪ್ರಭೇದಗಳ ನಿಖರ ಗುರುತಿಸುವಿಕೆ ಮತ್ತು ದಾಖಲಾತಿಗಾಗಿ ಹರ್ಬೇರಿಯಂ ಸ್ಥಾಪಿಸುವುದು. ಸಸ್ಯ ಪ್ರಭೇದಗಳ ಸಮಗ್ರ ಮಾಹಿತಿಯನ್ನು ದಾಖಲಿಸುವ ವೈಜ್ಞಾನಿಕ ಸಸ್ಯ ಕೇಂದ್ರವನ್ನಾಗಿಸುವುದು. ಸಸ್ಯ ಪ್ರಭೇದಗಳ ಬಗ್ಗೆ ಅಭ್ಯಸಿಸಲು ವಿದ್ಯಾರ್ಥಿಗಳು, ಪರಿಸರ ಪ್ರಿಯರು, ಸಸ್ಯ ಶಾಸ್ತ್ರೀಯ ಆಸಕ್ತರು, ಸಸ್ಯ ವರ್ಗೀಕರಣ ಆಸಕ್ತರಿಗೆ ವೈಜ್ಞಾನಿಕ ವೇದಿಕೆಯನ್ನು ಕಲ್ಪಿಸುವುದು ಈ ಸಸ್ಯ ಶಾಸ್ತ್ರೀಯ ತೋಟದ ಮೂಲ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್, ವಿಧಾನಸಭಾ ಶಾಸಕರಾದ ಜಿ .ಟಿ ದೇವೇಗೌಡ, ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಜೈ ಹಿಂದ್ ಕಟ್ಟೆಯಲ್ಲಿ ನವರಾತ್ರಿ ಸಂಭ್ರಮ

ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್ ವತಿಯಿಂದ ನಗರದ ಜೈ ಹಿಂದ್ ಕಟ್ಟೆಯಲ್ಲಿ ನವರಾತ್ರಿ ಸಂಭ್ರಮ ಕಾರ್ಯಕ್ರಮದಲ್ಲಿ…

ಬ್ರಾಹ್ಮಿ ಮಹಿಳಾ ಸಂಘ  ಆಶ್ರಯದಲ್ಲಿ ನವಕನ್ನಿಕ ಪೂಜೆ, ಲಲಿತಾ ಸಹಸ್ರನಾಮ, ,ಭಜನೆ ಕಾರ್ಯಕ್ರಮ

ಚಾಮರಾಜನಗರ: ದಸರಾ ನವರಾತ್ರಿ ಸಂಭ್ರಮದ ಅಂಗವಾಗಿ ಬ್ರಾಹ್ಮಿ ಮಹಿಳಾ ಸಂಘ  ಆಶ್ರಯದಲ್ಲಿ ನವಕನ್ನಿಕ ಪೂಜೆ, ಲಲಿತಾ ಸಹಸ್ರನಾಮ ,ಭಜನೆ ಹಾಗೂ ಭಾರತೀಯ…

ಅ. 26ರಂದು ನಗರದಲ್ಲಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 14 ರಿಂದ 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾ…

ಅ. 26 ಹಾಗೂ 30ರಂದು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೊಂದಣಿಗೆ ವಿಶೇಷ ಆಂದೋಲನ

ಚಾಮರಾಜನಗರ: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಇದುವರೆಗೂ ಹೆಸರನ್ನು ಸೇರಿಸದೇ ಇದ್ದಲ್ಲಿ ನಿಗದಿತ ನಮೂನೆ-19ರಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್…

ಅಂಗವಿಕಲರ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ: ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ಜಿಲ್ಲೆಯ ಅಂಗವಿಕಲರಿಗೆ ವಿವಾಹ ಪ್ರೋತ್ಸಾಹ ಧನದ ಸೌಲಭ್ಯಕ್ಕಾಗಿ ಅರ್ಜಿ…