ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿಗಳು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಡತನ ನಿವಾರಣೆ ಕಾರ್ಯಕ್ರಮ ರೂಪಿಸುವಾಗ ಸಮ ಸಮಾಜ ನಿರ್ಮಾಣ ಮಾಡಬೇಕು. ಯಾವ ಜಾತಿ ಸ್ವಾತಂತ್ರ‍್ಯ ಬಂದು 76 ವರ್ಷಗಳಾದರೂ ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅAಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ- ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ಇದು ಖಂಡಿತವಾಗಿಯೂ ಸಮಾಜವನ್ನು ಒಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಗ್ಯಾರಂಟಿ ಯೋಜನೆಗಳಿಗೆ ತೊಂದರೆ ಇಲ್ಲ. ಬರ ಪರಿಹಾರಕ್ಕೂ ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂ.ಗಳನ್ನು ಕೋರಿದ್ದೇವೆ. ಆದರೆ ಬೆಲೆ ನಷ್ಟವಾಗಿರುವುದು 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ. ಎಲ್ಲಾ ಸೇರಿ ಒಟ್ಟು 3000 ಕೋಟಿ ರೂ.ಗಳಿಗೂ ನಷ್ಟ ಉಂಟಾಗಿದೆ. ಎನ್. ಡಿ.ಆರ್.ಎಫ್ ನಿಯಮಗಳ ಪ್ರಕಾರ 4860 ಕೋಟಿ ರೂ.ಗಳನ್ನು ಕೋರಿದ್ದೇವೆ. ಕೇಂದ್ರ ಬರ ಅಧ್ಯಯನ ತಂಡ ಮೂರು ತಂಡಗಳಾಗಿ 11 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅವರು ವರದಿ ನೀಡಿದ ಆಧಾರದ ಮೇಲೆ ಕೇಂದ್ರ ಸರ್ಕಾರ ಪರಿಹಾರ ನಿಗದಿ ಮಾಡಲಿದೆ ಎಂದರು. ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವರದಿ ಪಡೆಯಲಿಲ್ಲ. ಈಗ ಬೇರೆ ಅಧ್ಯಕ್ಷರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್‌ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದರು. ಬಹಳ ಹಿಂದುಳಿದವರು ರಾಷ್ಟ್ರೀಯ ಮಟ್ಟದಲ್ಲಿ ಪ್ರತ್ಯೇಕ ವರ್ಗ ಬೇಕು ಎಂದು ಕರ್ನಾಟಕದಲ್ಲಿ ಬೇಡಿಕೆ ಇರುವ ಬಗ್ಗೆ ಉತ್ತರಿಸಿ ಅದನ್ನು ಮಾಡಲು ಹಿಂದುಳಿದ ವರ್ಗಗಳ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದರು. ಕೇoದ್ರ ಬರ ಅಧ್ಯಯನ ತಂಡ ಸರಿಯಾಗಿ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅಧ್ಯಯನ ತಂಡಕ್ಕೆ ಎಲ್ಲೆಡೆ ಭೇಟಿ ಮಾಡಿ,ಜನರ ಅಹವಾಲು ಕೇಳಬೇಕು, ಜನಪ್ರತಿನಿಧಿಗಳ ಮಾತನ್ನೂ ಆಲಿಸುವಂತೆ ಸೂಚಿಸಿದ್ದೇನೆ ಎಂದರು. ಕೇಂದ್ರ ಬರ ಅಧ್ಯಯನ ತಂಡ ಕಾವೇರಿ ಕಣಿವೆಗೆ ಭೇಟಿ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ಅದನ್ನು ನಾವು ತೀರ್ಮಾನಿಸುವುದಿಲ್ಲ. ಕೇಂದ್ರ ತಂಡ ಭೇಟಿ ನೀಡಬೇಕಾದ ಸ್ಥಳಗಳನ್ನು ನಿರ್ಧರಿಸುತ್ತದೆ. ಜಿಲ್ಲೆಗಳನ್ನು ಅವರೇ ಪಟ್ಟಿ ಮಾಡಿಕೊಳ್ಳುತ್ತಾರೆ ಎಂದರು. ಹಸಿರು ಬರ ಇದೆ. ಗಿಡ ಇದ್ದರೆ ಸಾಲದು, ಬೆಳೆ ಬರಬೇಕು ಎಂದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಅವಕಾಶವಿಲ್ಲ ಎಂದು ಹೇಳಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಡಿಯುವವರನ್ನು ತಡೆಯಲು ಆಗುವುದಿಲ್ಲ, ಅದರಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದಿರುವ ಬಗ್ಗೆ ಮಾತನಾಡಿ, ಹೊಸತಾಗಿ ತೆರೆಯುತ್ತೇವೆ ಎಂದು ಹೇಳಿಲ್ಲ. ಹೊಸತಾಗಿ ಕೊಡುತ್ತೇವೆ ಎಂದು ಹೇಳಿಲ್ಲ. ಅವರ ಅಭಿಪ್ರಾಯ ಹೇಳಿದ್ದಾರೆ. ನನ್ನ ಅಭಿಪ್ರಾಯದಲ್ಲಿ ಹೊಸ ಪರವಾನಾಗಿಯನ್ನು ಕೊಡಬೇಕಾದ ಅಗತ್ಯ ಇಲ್ಲ ಎಂದರು. ಸಾರ್ವಜನಿಕ ಅಭಿಪ್ರಾಯ ಏನಿದೆ ಎಂದು ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ಪ್ರಸ್ತುತ ನಮ್ಮ ಮುಂದೆ ಪ್ರಸ್ತಾವನೆ ಇಲ್ಲ. ಹೊಸ ಮದ್ಯದಂಗಡಿಗಳನ್ನು ತೆರೆಯಲು ಪರವಾನಗಿಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ ಖಂಡ್ರೆ, ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಗಾಯತ್ರಿ ಕೆ.ಎಂ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಕ್ತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ : ಶಾಸಕ ಡಿ.ರವಿಶಂಕರ್
ಸಾಲಿಗ್ರಾಮ: ರಕ್ತದಾನವು ಮಹಾದಾನವಾಗಿದ್ದು ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯತೆ ಇದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು. ಅವರು ಕರ್ನಾಟಕ…
ಅಕ್ಟೋಬರ್ 12ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ
ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಚರ್ಚಿಸಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 12ರಂದು ಬೆಳಿಗ್ಗೆ 11…
ಕಾಂಗ್ರೆಸ್ ಮುಖಂಡರ ಹೇಳಿಕೆಗೆ ಮುಡ್ಲುಪುರ ನಂದೀಶ್ ಖಂಡನೆ
ಚಾಮರಾಜನಗರ : ಶಾಸಕ ಶಾಮನೂರು ಶಿವಶಂಕರಪ್ಪ ವಿರುದ್ಧ ನೀಡುತ್ತಿರುವ ಕಾಂಗ್ರೆಸ್ ಮುಖಂಡರ ಹೇಳಿಕೆಯನ್ನು ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ನಂದೀಶ್ ಮೂಡ್ಲುಪುರ…
ತಗಡೂರು ರಾಮಚಂದ್ರ ರಾವ್ ಜನ್ಮ ದಿನ ಆಚರಣೆ
ಚಾಮರಾಜನಗರ: ನಗರದ ಜೈಹಿಂದ್ ಕಟ್ಟೆಯಲ್ಲಿ ಜೈಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಮೈಸೂರು ಗಾಂಧಿ ತಗಡೂರು ರಾಮಚಂದ್ರ ರಾವ್…
ಮ. ನರೇಗಾ ಕುರಿತ ಮಾಹಿತಿ, ದೂರುಗಳಿಗೆ ಉಚಿತ ಸಹಾಯವಾಣಿ ಲಭ್ಯ
ಚಾಮರಾಜನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದ ಸೌಲಭ್ಯಗಳು, ಮಾಹಿತಿ ಪಡೆಯಲು ಹಾಗೂ ದೂರು, ಸಮಸ್ಯೆಗಳನ್ನು ತಿಳಿಸಲು…
ಪಿ.ಎಂ. ಸ್ವ-ನಿಧಿ ಯೋಜನೆಯಡಿ ಸಾಲ ಸೌಲಭ್ಯ : ಸದುಪಯೋಗಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮನವಿ
ಚಾಮರಾಜನಗರ: ಸಾಮಾನ್ಯ ಜನರಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆಯನ್ನು ಒದಗಿಸುತ್ತಿರುವ ವ್ಯಾಪಾರಸ್ಥರು, ಮಾರಾಟಗಾರರು ಸೇರಿದಂತೆ ವಿವಿಧ ವರ್ಗದವರಿಗೆ ಪಿ.ಎಂ. ಸ್ವ-ನಿಧಿ ಯೋಜನೆಯಡಿ ಸಾಲ…
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರಿಂದ ವಿಶೇಷಚೇತನರಿಗೆ ತ್ರಿಚಕ್ರ ವಾಹನ, ಸಾಧನಾ ಸಲಕರಣೆ ವಿತರಣೆ
ಚಾಮರಾಜನಗರ:ವಿಕಲಚೇತನರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಡಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ವಿಶೇಷಚೇತನರಿಗೆ ತ್ರಿಚಕ್ರ ವಾಹನ, ಇತರೆ ಸಾಧನಾ ಸಲಕರಣೆಗಳನ್ನು…
ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿ ಪ್ರಕ್ರಿಯೆ : ಸಹಕರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಮನವಿ
ಚಾಮರಾಜನಗರ: ಚುನಾವಣಾ ಆಯೋಗವು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆಗೆ ವೇಳಾ ಪಟ್ಟಿ ಹೊರಡಿಸಿದ್ದು ಈ ಪ್ರಕ್ರಿಯೆಗೆ ರಾಜಕೀಯ…
ಅ. 10ರಂದು ಇನ್ಫೋಸಿಸ್, ರೋಟರಿ ಪಂಚಶೀಲ ಸಂಸ್ಥೆಯಿಂದ ಸರ್ಕಾರಿ ಶಾಲಾ ಕಾಲೇಜುಗಳಿಗೆ ಕಂಪ್ಯೂಟರ್, ಡಿಜಿಟಲ್ ಕಲಿಕಾ ಸೌಲಭ್ಯ ಹಿನ್ನೆಲೆ : ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ
ಚಾಮರಾಜನಗರ: ಜಿಲ್ಲೆಯ ವಿವಿಧ ಸರ್ಕಾರಿ ಶಾಲಾ ಕಾಲೇಜುಗಳಿಗೆ ಕಂಪ್ಯೂಟರ್ ಶಿಕ್ಷಣ, ಡಿಜಿಟಲ್ ಕಲಿಕೆ, ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲು ಇನ್ಫೋಸಿಸ್, ಮೈಸೂರಿನ ರೋಟರಿ…