ಭಾರತೀಯ ಪರಂಪರೆ ಹಾಗೂ ಸಂಸ್ಕೃತಿಯಲ್ಲಿ ಬೆರೆತು ಹೋದ ವ್ಯಕ್ತಿತ್ವ  ಶ್ರೀ ಕೃಷ್ಣ- ಪಿ ಶಿವರಾಜು

ಮೈಸೂರು: ಭಾರತೀಯ ಪರಂಪರೆ ಹಾಗೂ ಸಂಸ್ಕೃತಿಯ ರಕ್ತದಲ್ಲಿ ಬೆರೆತು ಹೋಗಿರುವ ವ್ಯಕ್ತಿತ್ವ ಶ್ರೀ ಕೃಷ್ಣ ಎಂದು ಅಪರ ಜಿಲ್ಲಾಧಿಕಾರಿಗಳಾದ ಪಿ ಶಿವರಾಜುರವರು…

ನಿವೃತ್ತ ಉಪನ್ಯಾಸಕರಿಗೆ ಸನ್ಮಾನ

ಚಾಮರಾಜನಗರ: ನಿವೃತ್ತ ಹೊಂದಿದ ಉಪನ್ಯಾಸಕರಾದ ಹರವೆ ಎಲ್ . ಬಸವರಾಜು ಅವರಿಗೆ ಭಗತ್ ಸಿಂಗ್ ಯುವಸೇನೆ ಹಾಗೂ ಸ್ವಾಮಿ ವಿವೇಕಾ ನಂದರ…

ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಪ್ರಮುಖ : ಶಾಸಕ ಎ.ಆರ್. ಕೃಷ್ಣಮೂರ್ತಿ

ಚಾಮರಾಜನಗರ: ಮೌಲ್ಯಾಧಾರಿತ, ಗುಣಮಟ್ಟದ ಶಿಕ್ಷಣ ಅಗತ್ಯವಿದ್ದು ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು…

ದಸರಾ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ…

ರಾಜೇಂದ್ರಶ್ರೀಗಳ ಸಾಧನೆ ಅನನ್ಯ: ಷಡಕ್ಷರಿ ಸ್ವಾಮಿ ಬಣ್ಣನೆ

ಶರಣ ಸಾಹಿತ್ಯಪರಿಷತ್‍ನಿಂದ ಮಹದೇವಮ್ಮ ರುದ್ರಪ್ಪ ದತ್ತಿ ಉಪನ್ಯಾಸಚಾಮರಾಜನಗರ: ರಾಜೇಂದ್ರಶ್ರೀಗಳು ಹಾಗೂ ಸಿದ್ದಗಂಗಾ ಶ್ರೀಗಳಿಬ್ಬರು ಕಾಯಕ ತಪಸ್ವಿಗಳು ಒಬ್ಬರು ಶಿಕ್ಷಣ ಮತ್ತೊಬ್ಬರು ಅನ್ನ…

ಸಮಾಜ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ : ಬಿ.ಕೆ. ರವಿಕುಮಾರ್

ಚಾಮರಾಜನಗರ: ಸಮಾಜ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದ್ದು, ಪ್ರತಿಯೊಬ್ಬರ ಯಶಸ್ಸಿನ ಹಿಂದೆ ಗುರುವಿವ ಕೊಡುಗೆ ಇರುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ…

ಕನ್ನೇರಿ ಕಾಲೋನಿ ಗಿರಿಜನ ಹಾಡಿಯಲ್ಲಿ ಸಮಗ್ರ ನೇತ್ರ ತಪಾಸಣೆ, ಹಿಮೋಗ್ಲೋಬಿನ್ ಪರೀಕ್ಷೆ ಶಿಬಿರಕ್ಕೆ ಚಾಲನೆ

ಚಾಮರಾಜನಗರ: ರಾಷ್ಟ್ರೀಯ ಅಂಧತ್ವ ನಿಯಂತ್ರಣದಡಿ ೨೦೨೩-೨೪ನೇ ಸಾಲಿನ ಆಶಾಕಿರಣ ಆಂದೋಲನ ಕಾರ್ಯಕ್ರಮದಡಿಯಲ್ಲಿ ಸಮಗ್ರ ನೇತ್ರ ತಪಾಸಣೆ ಮಾಡುವ ಸಲುವಾಗಿ ಪ್ರಾಥಮಿಕ ಹಂತದ…

ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಅಗತ್ಯ ಪರಿಹಾರ ಒದಗಿಸಲು…

ಶಿಕ್ಷಕ ವೃತ್ತಿ ಅತ್ಯಂತ ಪ್ರವಿತ್ರವಾದ ಸತ್ಪ್ರಜೆಗಳನ್ನು ರೂಪಿಸುವ ವೃತ್ತಿ : ಬಿ.ಕೆ. ರವಿಕುಮಾರ್

ಶಿಕ್ಷಕರ ದಿನಾಚರಣೆ : ಹಿರಿಯ ಶಿಕ್ಷಕರಾದ ಸಿ.ಎನ್. ಮಲ್ಲಣ್ಣ ಅವರಿಗೆ ಸನ್ಮಾನಚಾಮರಾಜನಗರ: ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದ ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳಾನ್ನಾಗಿ…

ಕನ್ನಡ ಕಲಿಕಾ ಕೇಂದ್ರ ಸ್ಥಾಪನೆಗೆ ಶೀಘ್ರ ಕ್ರಮ

ಮೈಸೂರು: ಹೊರ ರಾಜ್ಯದವರ ಕನ್ನಡ ಭಾಷಾ ಕಲಿಕೆಗಾಗಿ ಕನ್ನಡ ಕಲಿಕಾ ಕೇಂದ್ರ ಸ್ಥಾಪನೆ ಮಾಡುವ ಸಂಬoಧ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಕರ್ನಾಟಕ ಸುವರ್ಣ ಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಮೈಸೂರಿನ ಕಿರುಕಲಾ ರಂಗ ಮಂದಿರದಲ್ಲಿ ಸೋಮವಾರ ಕರೆದಿದ್ದ ಸಾಹಿತಿ, ರಂಗಕರ್ಮಿ ಹಾಗೂ ಕಲಾವಿದರೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು. ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ ನೆಲೆಸುವ ಹೊರ ರಾಜ್ಯದವರಿಗೆ ಕನ್ನಡ ಭಾಷೆ ಕಲಿಸಬೇಕು ಎಂಬ ಬಗ್ಗೆ ಅಧಿಕಾರಿಗಳ ಜತೆ ಒಂದೆರೆಡು ಸುತ್ತಿನ ಸಭೆ ನಡೆಸಲಾಗಿದೆ. ಕನ್ನಡ ಕಲಿಕೆಗೆ ತಂತ್ರಾAಶ ಪರಿಚಯಿಸುವ ಸಂಬ0ಧ ಕೂಡ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿಸಿದರು. ನ.1ಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಸುವ ಬಗ್ಗೆ ಆಯವ್ಯಯದಲ್ಲಿ ಈಗಾಗಲೇ ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗವಾರು ಸಾಹಿತಿಗಳ ಸಭೆ ಆಯೋಜನೆ ಮಾಡಿ ಸಲಹೆ ಪಡೆದುಕೊಳ್ಳಲಾಗಿದೆ. ಮೈಸೂರಿನಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದ ಪರಂಪರೆ, ಕನ್ನಡದ ಇತಿಹಾಸ ಹಾಗೂ ಸಂಸ್ಕೃತಿ ಬಿಂಬಿಸುವ ಹಿನ್ನೆಲೆಯಲ್ಲಿ ಕನ್ನಡರಥ ರಾಜ್ಯವಿಡೀ ಸಂಚಾರ ಮಾಡುವುದು, 31 ಜಿಲ್ಲೆಗಳಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಪ್ರತಿಮೆ ನಿರ್ಮಾಣ, ಕುವೆಂಪು ಅವರ ಸಾಹಿತ್ಯವನ್ನು ಕೇಂದ್ರವಾಗಿಟ್ಟುಕೊ0ಡು ಕಾರ್ಯಕ್ರಮ ಆಯೋಜನೆ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಭಾಗಿಯಾಗಿದ್ದ ಗಣ್ಯರ ಸನ್ಮಾನ, ಗಡಿನಾಡಿನಲ್ಲಿ ಕನ್ನಡ ಬಿತ್ತುವುದು ಸೇರಿದಂತೆ ಹೀಗೆ ಹಲವು ಸಲಹೆಗಳು ಬಂದಿವೆ. ಈ ಸಲಹೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಳಿ ಚರ್ಚೆ ನಡೆಸಿ ಕಾರ್ಯಕ್ರಮದ ರೂಪುರೇಷೆಯನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಅವಧಿಯಲ್ಲಿ ಕರ್ನಾಟಕ ಎಂದು ಹೆಸರು ನಾಮಕರಣ ಮಾಡಲಾಗಿತ್ತು. ಇದೀಗ ಮೈಸೂರು ಭಾಗದವರೇ ಆದ ಸಿದ್ದರಾಮಯ್ಯ ಅವರ ಅವಧಿಯಲ್ಲಿ 50ರ ಸಂಭ್ರಮದಲ್ಲಿರುವುದು ಹೆಮ್ಮೆಯ ಸಂಗತಿ. ವರ್ಷವಿಡೀ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದರು. ಶೀಘ್ರ ನೇಮಕ: ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಶೀಘ್ರವೇ ಅಧ್ಯಕ್ಷರ ನೇಮಕ ಮಾಡಲಾಗುವುದು. ಈ ಸಂಬ0ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳು 247 ಕೋಟಿ ರೂ. ಅನುದಾನ ನೀಡಿದ್ದಾರೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು. ಸಭೆಯಲ್ಲಿ ಸಾಹಿತಿಗಳಾದ ಸಿ.ಪಿ.ಕೃಷ್ಣಕುಮಾರ್, ಹಿ.ಶಿ.ರಾಮಚಂದ್ರೇಗೌಡ, ಪ್ರಸನ್ನ, ಚನ್ನಿ ಜನಾರ್ಧನ್, ಮಂಡ್ಯ ರಮೇಶ್, ಪ್ರೊ. ಕೆ.ಎಸ್.ಭಗವಾನ್, ಬಿ.ಎಂ.ರಾಮಚ0ದ್ರ, ಲತಾ ರಾಜಶೇಖರ್, ತುಳಸಿ ರಾಮಚಂದ್ರ, ಕಾಳೇಗೌಡ ನಾಗವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶ್ವನಾಥ್ ಹಿರೇಮಠ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್, ಅಧಿಕಾರಿಗಳಾದ ಮಧುಸೂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.