ಚಾಮರಾಜನಗರ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇಂದು ನಡೆಯಿತು.
ಚಾಮರಾಜನಗರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ, ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಬಾಲ ನ್ಯಾಯ ಮಂಡಳಿಯ ಸದಸ್ಯರಾದ ಗಂಗಾಧರ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಡಿ.ವೈ.ಪಿ.ಸಿ ಪ್ರಭಾ, ಹಿರಿಯ ಕಾರ್ಮಿಕ ನಿರೀಕ್ಷಕರಾದ ಪ್ರಸಾದ್, ಯೋಜನಾ ನಿರ್ದೇಶಕರಾದ ಮಹೇಶ್, ಹಿರಿಯ ಉಪನ್ಯಾಸಕರಾದ ಸುರೇಶ್ ಋಗ್ವೇದಿ, ಸಹಾಯವಾಣಿ ಜಿಲ್ಲಾ ಸಂಯೋಜಕರಾದ ಸಿದ್ದರಾಜು, ಕಾರ್ಮಿಕ ಇಲಾಖೆಯ ರಾಜೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 150ಕ್ಕೂ ಹೆಚ್ಚು ಶಾಲಾ-ಕಾಲೇಜು ವಿದ್ಯಾರ್ಥಿಗಳು ಉತ್ಸಾಹದಿಂದ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು
Related