ಚಾಮರಾಜನಗರ: ನಗರದ ವಾರ್ಡ್ ನಂ.15ರಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ್ ಅವರು ಮೊದಲನೇ ವರ್ಷದ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು.
ನಗರ ಸಭಾ ಸದಸ್ಯ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ನಂತರ ಮಾತನಾಡಿದ ಆರ್.ಪಿ.ನಂಜುಂಡಸ್ವಾಮಿ ಅವರು, ದಿವಂಗತ ಆರ್.ಧ್ರುವನಾರಾಯಣ್ ಅವರು, ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಾರ್ವಜನಿಕರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡಿದ್ದು, ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದರು ಎಂದು ಅವರ ಕಾರ್ಯಗಳನ್ನು ಸ್ಮರಿಸಿದರು.
ಅತ್ಯಂತ ಕ್ರಿಯಾಶೀಲ ಸಂಸದರಾಗಿ ನಮ್ಮೆಲ್ಲರ ನೆಚ್ಚಿನ ರಾಜಕಾರಣಿ ಆರ್. ಧ್ರುವನಾರಾಯಣ ಅವರು ನಿಧನರಾಗಿ ಇಂದಿಗೆ ಒಂದು ವರ್ಷ ಕಳೆದಿದೆ. ಅವರು ಭೌತಿಕ ವಾಗಿ ನಮ್ಮೊಂದಿಗಿಲ್ಲ. ಆದರೆ ಅವರು ಮಾಡಿರುವ ಸೇವಾ ಕಾರ್ಯಗಳು ಶಾಶ್ವತವಾಗಿ ನಮ್ಮುಂದೆ ಇದೆ. ಎರಡು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ, ದೇಶವೇ ಮೆಚ್ಚುವಂತಹ ಉತ್ತಮ ಸೇವೆ ಸಲ್ಲಿಸಿದ್ದರು. ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ನಿಷ್ಠೆ, ಪ್ರಾಮಾಣಿಕತೆ ಕಾಪಾಡಿಕೊಂಡು ಬಂದಿದ್ದರು ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ವಕೀಲ ಪೃಥ್ವಿರಾಜ್, ನಲ್ಲೂರು ಸೋಮೇಶ್, ಜ್ಯೋತಿಗೌಡನಪುರ ನಾಗರಾಜ್, ವಾರ್ಡ್‍ನ ಮುಖಂಡರಾದ ಚಂದ್ರು,ಗಿರೀಶ್, ರಾಚಪ್ಪ, ಸತೀಶ್ ಸೇರಿದಂತೆ ಮತ್ತಿತರರಿದ್ದರು.