ಕ್ರಿಕೆಟ್ ಆಟದಿಂದ ಆರೋಗ್ಯ ವೃದ್ಧಿ: ಎಂ.ರಾಮಚಂದ್ರ

  • ಶ್ರೀಮಹರ್ಷಿ ವಾಲ್ಮೀಕಿ ಕ್ರಿಕೆಟ್ ಕಪ್‌ಗೆ ಚಾಲನೆ

ಚಾಮರಾಜನಗರ. : ಕ್ರಿಕೆಟ್ ಆಟವು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಉತ್ತಮ ಹಾದಿಯಾಗಿದೆ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.
ನಗರದ ಮಹದೇಶ್ವರ ಬಡಾವಣೆಯಲ್ಲಿ ಫ್ರೆಂಡ್ ಬಾಯ್ ವತಿಯಿಂದ ನಡೆದ ಶ್ರೀಮಹರ್ಷಿ ವಾಲ್ಮೀಕಿ ಕ್ರಿಕೆಟ್ ಕಪ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಒಳ ಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದರು.
ನಾವು ಶಾಲೆಯಲ್ಲಿ ಓದುವ ಸಂದರ್ಭದಲ್ಲಿ ಗ್ರಾಮೀಣ ಕ್ರೀಡೆಗಳಾದ ಕಬ್ಬಡಿ, ಖೋಖೋ, ವಾಲಿಬಾಲ್, ಪುಟ್‌ಬಾಲ್, ಬ್ಯಾಡ್ಮಿಂಟನ್ ಸೇರಿದಂತೆ ಅನೇಕ ಕ್ರೀಡೆಗಳು ಪ್ರಸಿದ್ಧಿ ಪಡೆದಿದ್ದವು. ಆದರೆ ಇಂದು ಕ್ರಿಕೆಟ್ ಪ್ರತಿಯೊಂದು ಹಳ್ಳಿಯಲ್ಲೂ ಮನೆಮನೆಯಲ್ಲೂ ಕ್ರಿಕೆಟ್ ಆಟಗಾರರು ಇದ್ದಾರೆ. ಕ್ರಿಕೆಟ್‌ನ್ನು ಬಹಳ ಅಹಕ್ತಿಯಿಂದ ಆಟವಾಡುತ್ತಿದ್ದಾರೆ. ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಎಲ್ಲ ಕ್ರೀಡಾಪಟುಗಳಿಗೂ ಒಳ್ಳೆಯದಾಗಲಿ ಎಂದು ಶುಭಕೋರಿದರು.
ಮುಖಂಡ ಪು.ಶ್ರೀನಿವಾಸನಾಯಕ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯವಾಗಿದೆ ಎಂದು ಕ್ರಿಕೆಟ್ ಆಟಗಾರರಿಗೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಕ್ರಿಕೆಟ್ ಆಟಗಾರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *