ಯಾವುದೇ ಸಮಾಜ ಆರ್ಥಿಕವಾಗಿ, ರಾಜಕೀಯವಾಗಿ ಮುಂದೆ ಬರಲು ರಾಜಕೀಯ ಪ್ರಾತಿನಿಧ್ಯ ಅಗತ್ಯ : ಸಚಿವ ಸಿ.ಪುಟ್ಟರಂಗಶೆಟ್ಟಿ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೋಡಿ ಕಲ್ಲೇನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ ದೇವಾಲಯದ ನೂತನ ಗೋಪುರ ನಿರ್ಮಾಣ ಹಾಗೂ ಕಳಸಾರೋಹಣ ಮಹೋತ್ಸವವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿತ್ತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಭಾಗವಹಿಸಿ ಶ್ರೀ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.

ಬಳಿಕ ಮಾತನಾಡಿದ ಸಚಿವರು, ಇಂದು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ.

ಹನುಮಂತರಾಯನು ನಾಡಿಗೆ ಉತ್ತಮ ಮಳೆ-ಬೆಳೆ ಕರುಣಿಸಿ, ಜನರಿಗೆ ಸುಖ, ಶಾಂತಿ ಹಾಗೂ ನೆಮ್ಮದಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ಯಾವುದೇ ಸಮಾಜದವರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ರಾಜಕೀಯವಾಗಿ ಬೆಳೆಯುವುದು ಬಹಳ ಮುಖ್ಯ. ಯಾವುದೇ ಸಮಾಜದವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಮಾನಗಳನ್ನು ಪಡೆದು ಮುನ್ನೆಲೆಗೆ ಬಂದಾಗ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

Leave a Reply

Your email address will not be published. Required fields are marked *