ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗ ವ್ಯಾಪ್ತಿಯ ದೊಡ್ಡರಾಯಪೇಟೆ ವಿದ್ಯುತ್ ಉಪಕೇಂದ್ರದ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಜನವರಿ ೨೧ರಂದು ಬೆಳಿಗ್ಗೆ ೯.೩೦ ರಿಂದ ಸಂಜೆ ೫.೩೦ ಗಂಟೆಯವರೆಗೆ ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ರಸ್ತೆ, ಗ್ಯಾಸ್ ಆಫೀಸ್ ಸುತ್ತಾಮುತ್ತಾ, ದೇವಾಂಗ ಬೀದಿ, ಕೆ.ಪಿ. ಮೊಹಲ್ಲಾ, ರಮೇಶ್ ಲೇಔಟ್, ರಾಜಪ್ಪ ತೋಟದ ಸುತ್ತಮುತ್ತಾ, ಡಾ. ಬಿ.ಆರ್. ಅಂಬೇಡ್ಕರ್ ಬಡಾವಣೆ, ವಾಣಿಯಾರ್ ರಸ್ತೆ, ಗುಂಡ್ಲುಪೇಟೆ ರಸ್ತೆ ಮತ್ತು ವೃತ್ತ, ನಾರಾಯಣಸ್ವಾಮಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *