ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆಯಲ್ಲಿ ಪ್ರಹ್ಲಾದ್‌ಗೆ ದ್ವಿತೀಯ ಸ್ಥಾನ: ರಾಜ್ಯಮಟ್ಟಕ್ಕೆ ಆಯ್ಕೆ

ಚಾಮರಾಜನಗರ: ಸೇವಾ ಭಾರತಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಹ್ಲಾದ್ ಅವರು ವಿಜ್ಞಾನ ಮಾದರಿ ತಯಾರಿಕೆ (ಸೈನ್ಸ್ ಮಾಡೆಲ್ ಮೇಕಿಂಗ್) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮೈಸೂರಿನ ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಲಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜ್ಞಾನ ಮಾದರಿ ತಯಾರಿಕೆ ವಿಭಾಗದಲ್ಲಿ ಭಾಗವಹಿಸಿದ್ದ ಪ್ರಹ್ಲಾದ್ ಅವರು ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯಿಂದ ದ್ವಿತೀಯ ಸ್ಥಾನ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *