ಚಾಮರಾಜನಗರ: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯು ನವೆಂಬರ್ 21ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಭೆ ನಡೆಯುವ ಮುಂಚಿತವಾಗಿ ಸಾರ್ವಜನಿಕರಿಗೆ ಅರ್ಜಿ ನಮೂನೆಗಳನ್ನು ಮನೆ ಬಾಗಿಲಿಗೆ ವಿತರಿಸಲಾಗುತ್ತಿದ್ದು, ಸದರಿ ಅರ್ಜಿ ನಮೂನೆಗಳು ತಲುಪದೆ ಇದ್ದಲ್ಲಿ ತಾಲ್ಲೂಕು ಕಚೇರಿ ಮತ್ತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡೆದುಕೊಳ್ಳಬಹುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
Related