ಅ. 3ರಂದು ಹನೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆ : ಜನರ ಅಹವಾಲು ಆಲಿಕೆ

ಚಾಮರಾಜನಗರ: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಅಕ್ಟೋಬರ್ 3ರಂದು ಬೆಳಿಗ್ಗೆ 10.30 ಗಂಟೆಗೆ ಹನೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.   

ಸಭೆ ನಡೆಯುವ ಮುಂಚಿತವಾಗಿ ಸಾರ್ವಜನಿಕರಿಗೆ ಅರ್ಜಿ ನಮೂನೆಗಳನ್ನು ಮನೆ ಬಾಗಿಲಿಗೆ ವಿತರಿಸಲಾಗುತ್ತಿದ್ದು, ಸದರಿ ಅರ್ಜಿ ನಮೂನೆಗಳು ತಲುಪದೆ ಇದ್ದಲ್ಲಿ ತಾಲ್ಲೂಕು ಕಚೇರಿ ಮತ್ತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಳಿ ಪಡೆದುಕೊಳ್ಳಬಹುದು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *