ಚಾಮರಾಜನಗರ: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 10.30 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ ಗುರು ಭವನದಲ್ಲಿ ಆಯೋಜಿಸಲಾಗಿದೆ.
ಸಭೆ ನಡೆಯುವ ಮುಂಚಿತವಾಗಿ ಸಾರ್ವಜನಿಕರಿಗೆ ಅರ್ಜಿ ನಮೂನೆಗಳನ್ನು ಮನೆ ಬಾಗಿಲಿಗೆ ವಿತರಿಸಲಾಗುತ್ತಿದ್ದು, ಸದರಿ ಅರ್ಜಿ ನಮೂನೆಗಳು ತಲುಪದೆ ಇದ್ದಲ್ಲಿ ತಾಲ್ಲೂಕು ಕಚೇರಿ ಮತ್ತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಳಿ ಪಡೆದುಕೊಳ್ಳಬಹುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
Related