ಫೆ. 1 ರಂದು ಕರ್ನಾಟಕ ಪ್ರತಿಭಾ ಅಕಾಡೆಮಿಯಿಂದ ಪ್ರತಿಭಾ ಪುರಸ್ಕಾರ: ಸುಭಾಷ್ ಮಾಡ್ರಹಳ್ಳಿ

ಚಾಮರಾಜನಗರ: ಮಾನವ ಬಂಧುತ್ವ ವೇದಿಕೆಯ ಅಂಗ ಸಂಸ್ಥೆಯಾದ ಕರ್ನಾಟಕ ಪ್ರತಿಭಾ ಅಕಾಡೆಮಿ ಜಿಲ್ಲಾ ಘಟಕದ ವತಿಯಿಂದಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ 50 ಮಕ್ಕಳಿಗೆ ಫೆ. 1 ರಂದು ಭಾನುವಾರ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಆಕಾಮಿಯ ಜಿಲ್ಲಾ ಸಂಯೋಜಕ ಸುಭಾಷ್ ಮಾಡ್ರಳ್ಳಿ  ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ನಗರದ ಸತ್ತಿರಸ್ತೆ ಸಿದ್ದಾರ್ಥ ಚಿತ್ರಮಂದಿರದ ಹತ್ತಿರವಿರುವ ಕಾಮಧೇನು ಕನ್ವೆನ್ಷನ್ ಹಾಲ್ ನಲ್ಲಿ ನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭವನ್ನು ಎಂಎಸ್ಐಎಲ್ ಅಧ್ಯಕ್ಷರು, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಲಿದ್ದಾರೆ.
ಕರ್ನಾಟಕ ಪ್ರತಿಭಾ ಆಕಾಡೆಮಿ ರಾಜ್ಯ ಸಂಚಾಲಕ ಪ್ರೋ ಎ.ಬಿ.ರಾಮಚಂದ್ರಪ್ಪ,  ಜಿಲ್ಲಾಸಂಚಾಲಕ ಸುಭಾಷ್ ಮಾಡ್ರಹಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಅಶ್ವಿನಿ ಮುಖ್ಯಭಾಷಣ ಮಾಡುವವರು. ಮೈಸೂರು ವಿಭಾಗೀಯ ಸಂಚಾಲಕ ದ್ಯಾವಪ್ಪನಾಯಕ ಪುರಸ್ಕೃತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಹೆಚ್.ವಿ.ಚಂದ್ರು, ಸಮಾಜಸೇವಕ ಶ್ರೀನಿಧಿ, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಕೆಂಪರಾಜು, ಜಿ.ಪಂ.ಮಾಜಿ ಸದಸ್ಯ ಎಸ್.ಸೋಮನಾಯಕ ಅರಕಲವಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪು.ಶ್ರೀನಿವಾಸನಾಯಕ, ಅಹಿಂದ ಯುವ ಘಟಕ ದ ರಾಜ್ಯಾಧ್ಯಕ್ಷ ಮಹೇಶ್ ಹಳೇಪುರ, ಜಿಲ್ಲಾ ಕೆಡಿಪಿ ಸದಸ್ಯ ಸೈಯದ್ ಮುಸಾಯಿಬ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮದನ್ ಕುಮಾರ್, ಸಮಾಜಸೇವಕರಾದ ಗಿರೀಶ್ ಬಾಬು, ಕಿರಣ್ ಎಸ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
  ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಸಮುದಾಯವಾರು ಅತಿ ಹೆಚ್ಚು ಅಂಕಪಡೆದ ಎಸ್ಎಸ್ಎಲ್ ಸಿಯಲ್ಲಿ 5 ವಿದ್ಯಾರ್ಥಿಗಳು ಪಿಯುಸಿ ಯಲ್ಲಿ 5 ವಿದ್ಯಾರ್ಥಿಗಳಿಗೆ ಒಟ್ಟು 50 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದರು.
  ಪತ್ರಿಕಾಗೋಷ್ಠಿಯಲ್ಲಿ  ಕರ್ನಾಟಕ ಪ್ರತಿಭಾ ಅಕಾಡೆಮಿಯ ಗುಂಡ್ಲುಪೇಟೆ ತಾಲೂಕು ಸಂಚಾಲಕ ಆರ್.ಸೋಮಣ್ಣ, ಕೊಳ್ಳೇಗಾಲ ತಾಲೂಕು ಅಧ್ಯಕ್ಷ  ಸುನೀಲ್, ಯಳಂದೂರು ತಾಲ್ಲೂಕು ಅಧ್ಯಕ್ಷ  ಸುಂದರ್ ಕಲಿವೀರ್,  ಜಿಲ್ಲಾ ಮಹಿಳಾ ಸಂಚಾಲಕಿ ಶಾಂತಕುಮಾರಿ  ಹಾಜರಿದ್ದರು.

Leave a Reply

Your email address will not be published. Required fields are marked *