ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ: ಮಹಮ್ಮದ್‌ ಅಸ್ಗರ್

  • ಚಾಮರಾಜನಗರ 1ನೇ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಚಾಮರಾಜನಗರ: ಪ್ರತಿಭಾ ಕಾರಂಜಿಯು ಶಾಲಾ ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳನ್ನು ಗುರುತಿಸಲು, ಪ್ರೋತ್ಸಾಹಿಸಲು ಸಹಕಾರಿಯಾಗಿದೆ ಎಂದರು ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್ ಹೇಳಿದರು.

ನಗರದ ಸರ್ಕಾರಿ ಪದವಿಪೂರ್ವ ಬಾಲಕರ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಸಮೂಹ ಸಂಪನ್ಮೂಲ ಕೇಂದ್ರ ದ ವತಿಯಿಂದ ನಡೆದ ಚಾಮರಾಜನಗರ 1ನೇ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಠ್ಯದ ಜೊತೆಗೆ ಪ್ರಠ್ಯೇತರ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡುವ ಈ ಕಾರ್ಯಕ್ರಮವು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹಲವು ರೀತಿಯಲ್ಲಿ ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದರು.

ಈ ಕಾರ್ಯಕ್ರಮ ಶಾಲಾಹಂತದಿಂದ ಕ್ಲಸ್ಟರ್, ತಾಲೂಕು, ಜಿಲ್ಲೆ. ಹಾಗೂ ರಾಜ್ಯ ಮಟ್ಟದವರೆಗೆ ಸ್ಪರ್ಧೆಗಳು ನಡೆಯುವುದರಿಂದ ಮಕ್ಕಳಿಗೆ ದೊಡ್ಡಮಟ್ಟದ ವೇದಿಕೆಗಳು ಪರಿಚಯವಾಗುತ್ತದೆ. ಜನಸಮೂಹದ ಮುಂದೆ ಕಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರಿಂದ ಮಕ್ಕಳಲ್ಲಿರುವ ಸಂಕೋಶ, ಭಯ ದೂರವಾಗಿ ಆತ್ಮವಿಶ್ವಾಸ ಹೆಚ್ಚುತ್ತದೆ. ಇಲ್ಲಿ ಭಾಗವಹಿಸಿರುವ ಮಕ್ಕಳು ತಾಲೂಕು, ಜಿಲ್ಲೆ, ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಯ ಕೀರ್ತಿ ಬೆಳಗಿಸಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ. ಕರ್ನಾಟಕ ರಾಜ್ಯ ಪ್ರಾಥಮಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಉಪಾಧ್ಯಕ್ಷ ಸಿ.ಎಂ.ಸುಶೀಲ, ಎಸ್.ಜಿ.ರಾಜು, ಎಸ್‌ಸಿ, ಎನ್‌ಟಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆಂಪರಾಜು, ಸಿಆರ್‌ಪಿ ಮಹೇಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಶಿವಕುಮಾರಯ್ಯ, ಸಹ ಕಾರ್ಯದರ್ಶಿ ಬಿ.ಕೃಷ್ಣಮೂರ್ತಿ, ಎಂವೈ ಎಫ್ ಶಾಲೆಯ ಮುಖ್ಯಸ್ಥ ಮಹಮ್ಮದ್ ಸಬ್ಬೀರ್, ಮುಖ್ಯ ಶಿಕ್ಷಕಿರಾದ ವಿ.ಮಹದೇವಯ್ಯ, ಶಿವರಾಜ್, ನಾಗಲಕ್ಷ್ಮೀ, ಐಆರ್‌ಟಿ ರೆಬೆಲ್ಲೋ, ಕೆ.ಗುರುಮೂರ್ತಿ, ಪುಷ್ಪಲತಾ, ನಂಜುಂಡಸ್ವಾಮಿ ಹಾಗೂ ಕ್ಲಸ್ಟರ್ ಮಟ್ಟದ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *