ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ : ಬಿಇಓ ಹನುಮಶೆಟ್ಟಿ

  • ಚಾಮರಾಜನಗರ-2 ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ


ಚಾಮರಾಜನಗರ: ಮಕ್ಕಳಲ್ಲಿ ಅಡಗಿರುವ ಸುಪ್ತಪ್ರತಿಭೆಗಳನ್ನು ಹೊರತರಲು ಪ್ರತಿಭಾಕಾರಂಜಿ ಮತ್ತು ಶಾಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯುತ್ತಮ ವೇದಿಕೆಗಳಾಗಿವೆ ಎಂದು ಕ್ಷೇತ್ರ ಶಿಕ್ಷಣಾಕಾರಿ ಹನುಮಶೆಟ್ಟಿ ಹೇಳಿದರು.
ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಪ್ರೌಢಶಾಲಾವರಣದಲ್ಲಿರುವ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ, ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ನಡೆದ ಚಾಮರಾಜನಗರ-2 ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯ ವಿನೂತನ ಕಾರ್ಯಕ್ರಮಗಳಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವೂ ಕೂಡ ಒಂದಾಗಿದ್ದು, ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶವಾಗಿದೆ ಎಂದರು.
ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಶಾಲಾ ಹಂತ, ಕ್ಲಸ್ಟರ್ ಹಂತ, ತಾಲೂಕು ಹಂತ, ಜಿಲ್ಲಾ ಮಟ್ಟ, ರಾಜ್ಯ ಮಟ್ಟದಲ್ಲಿ ಹಮ್ಮಿಕೊಂಡು ಬರುತ್ತಿದೆ. ಚಾಮರಾಜನಗರ -2 ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯುತ್ತಿರುವುದು. ತಾಲೂಕಿನ 26 ಕ್ಲಸ್ಟರ್‌ಗಳಿದ್ದು, ಎಲ್ಲವೂ ಮುಗಿಯುವ ಹಂತದಲ್ಲಿದ್ದು, ಮುಂದಿನ ವಾರ ಮುಂದಿನ ಹಂತವಾದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಮಾತನಾಡಿ, 2002ರಲ್ಲಿ ಆರಂಭವಾದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ 25, 26 ವರ್ಷ ತುಂಬುತ್ತಿದೆ. ನಾವು ಓದುವಾಗ ಇಂತಹ ಕಾರ್ಯಕ್ರಮಗಳು ಇರಲಿಲ್ಲ. ಪ್ರಸ್ತುತ ಓದುವ ಮಕ್ಕಳಿಗೆ ಪಠ್ಯದ ಜೊತೆಗೆ… ಪಠ್ಯೇತರ ಚಟುವಟಿಕೆಗಳಲ್ಲೂ ಹೆಚ್ಚು ಅವಕಾಶವಿದೆ ಇಂತಹ ಅವಕಾಶ ವಿದ್ಯಾರ್ಥಿಗಳು. ಸದುಪಯೋಗಪಡಿಸಿಕೊಂಡು ಜಿಲ್ಲೆಯ ಪತಾಕೆಯನ್ನು ರಾಜ್ಯ ದೇಶ ಮಟ್ಟದಲ್ಲಿ ಬೆಳಗಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಶೀಲಾರಾಣಿ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆ ವಿವಿಧ ‌ ಕಾರ್ಯಕ್ರಮಗಳನ್ನು ಮಾಡಲಾಗುತದೆ. ಪಕ್ಕ, ಪಕ್ಷೇತರ ಚಟುವಟಿಕೆಗಳನ್ನು ತೆಗೆದುಕೊಂಡಾಗ ಪ್ರತಿವರ್ಷದಂತೆ ಈ ಬಾರಿಯು ಪ್ರತಿಭಾ ಕಾರಂಜಿ ಮೂಲಕ ಮಕ್ಕಳಲ್ಲಿ ಸೂಪ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಮುಖ್ಯ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಬಿ.ಕೃಷ್ಣಮೂರ್ತಿ, ಮುಖ್ಯ ಶಿಕ್ಷಕ ತ್ಯಾಗರಾಜು, ಇಸಿಓಗಳಾದ ರೇವಣ್ಣ, ಶಿವಕುಮಾರ್, ಸಲ್ಮಾಸಿದ್ದಿಕಾ, ಬಿಆರ್‌ಪಿ ವೈ.ಎಸ್.ಮಹದೇವಸ್ವಾಮಿ, ಸಿಆರ್‌ಪಿಗಳಾದ ಮಹೇಶ್, ಶಿವಕುಮಾರ್, ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷರಾದ ನಾಗಲಕ್ಷ್ಮಿ, ನಿರ್ಮಲ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *