ಪತ್ರಕರ್ತರ ಗೃಹ ನಿರ್ಮಾಣ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಚಾಮರಾಜನಗರ : ತಾಲ್ಲೂಕು ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಈ.ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ವೀರಭದ್ರಪ್ಪ ಅವಿರೋಧವಾಗಿ ಆಯ್ಕೆಯಾದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಚುನಾವಣೆ ನಡೆದು ಸಂಘದ ಅಧ್ಯಕ್ಷ ಸ್ಥಾನಕ್ಕೆ ಎಂ.ಈ.ಮಂಜುನಾಥ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವೀರಭದ್ರಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾದ ಪದ್ಮನಾಭ ಅವರು ಅವಿರೋಧ ಆಯ್ಕೆ ಘೋಷಿಸಿದರು.
ಚುನಾವಣೆಯಲ್ಲಿ ಸಂಘದ ನಿರ್ದೇಶಕರಾದ ಆರ್.ಎಂ.ಲಿಂಗಪ್ಪ, ಸಿ.ಮಹೇಂದ್ರ, ವೀರಭದ್ರ ನಾಯಕ, ಕಾಗಲವಾಡಿ ಬಸವಣ್ಣ, ಆರ್. ರಾಜೇಂದ್ರ, ವೈ.ಕೆ.ಮೊಳೆ ಬಸವರಾಜು, ಹೊಸೂರು ರಾಜು, ರಾಮಸಮುದ್ರ ಬಾಬು, ಎಂ.ಜಿ.ಶ್ರೀಕಾಂತ್ ಪಾಲ್ಗೊಂಡಿದ್ದರು.
ನೂತನ ಅಧ್ಯಕ್ಷರಾದ ಎಂ.ಈ. ಮಂಜುನಾಥ್ ಮಾತನಾಡಿ, ಸಂಘದ ನಿರ್ದೇಶಕರು ಮತ್ತು ಸದಸ್ಯರು ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಗಳನ್ನು ಹುಸಿಗೊಳಿಸುವುದಿಲ್ಲ. ಸಂಘದ ಸದಸ್ಯರು ಮತ್ತು ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿವೇಶನ ಕೊಡಿಸಲು ಶ್ರಮ ವಹಿಸಲಾಗುವುದು ಎಂದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದಲಿಂಗಸ್ವಾಮಿ, ನಮ್ಮ ಸಂಘವು ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಪತ್ರಕರ್ತರಿಗೆ ನಿವೇಶನ ಕೊಡಿಸಲು ನೂತನ ಪದಾಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಲಕ್ಕೂರು, ಖಜಾಂಚಿ ಆರ್.ಸಿ.ಪುಟ್ಟರಾಜು, ಉಪಾಧ್ಯಕ್ಷರಾದ ಬದನಗುಪ್ಪೆ ಪ್ರಸಾದ್, ಹಿರಿಯ ಪತ್ರಕರ್ತರಾದ ಎ.ಡಿ.ಸಿಲ್ವಾ, ಬನಶಂಕರ ಆರಾಧ್ಯ, ಫಾಲಲೋಚನ ಆರಾಧ್ಯ, ವಿಜಯಕುಮಾರ್, ಬಿಳಿಗಿರಿಶ್ರೀನಿವಾಸ್, ಎಚ್.ಎಸ್.ಚಂದ್ರಶೇಖರ್, ಸಿದ್ದಪ್ಪಾಜಿ, ಪ್ರಮೋದ್ ಇತರರಿದ್ದರು.

Leave a Reply

Your email address will not be published. Required fields are marked *