- ಜಲಶಕ್ತಿ ಮಂತ್ರಾಲಯದ ನಿರ್ದೇಶಕ ಪಿ. ಶಿವಶಂಕರ್ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ ನಿರ್ದೇಶಕರಾದ ಪಿ. ಶಿವಶಂಕರ್ ರವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿಯ ಸದಸ್ಯರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2026-27ನೇ ಸಾಲಿನ ಕ್ರಿಯಾ ಯೋಜನೆಯನ್ನು ಯುಕ್ತದಾರ ತಂತ್ರಾಂಶದ ಸಹಯೋಗದೊಂದಿಗೆ ವೈಜ್ಞಾನಿಕವಾಗಿ ತಯಾರಿಸಬೇಕು. ಅಂತರ್ಜಲ ಮಟ್ಟದ ಸುಧಾರಣೆಗೆ ಅಗತ್ಯವಿರುವ ಕೊಳವೆಬಾವಿ ಮರುಪೂರಣ ಪಿಟ್ ಗಳ ನಿರ್ಮಾಣ, ಚೆಕ್ ಡ್ಯಾಂಗಳ ನಿರ್ಮಾಣ ಹಾಗೂ ಸಸಿ ನೆಡುವ ಕಾಮಗಾರಿಗಳನ್ನು ಆದ್ಯತೆ ಮೆರೆಗೆ ಅನುμÁ್ಠನಗೊಳಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ಕ್ರಮಬದ್ದವಾಗಿ ನಡೆಸಬೇಕು ನೀರಿನ ಸಂರಕ್ಷಣೆಗೆಯಾಗಬೇಕು ಎಂದರು.
ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅಟಲ್ ಭೂಜಲ್ ಯೋಜನೆಯಡಿ ನೀರಿನ ಬಳಕೆ ಹಾಗೂ ನೀರಿನ ಸಂರಕ್ಷಣೆಯ ಕಾಮಗಾರಿಗಳು ಮತ್ತು ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿಯ ಅಧ್ಯಕ್ಷರಾದ ಮೋನಾ ರೋತ್, ಕೇಂದ್ರ ಅಂತರ್ಜಲ ಮಂಡಳಿಯ ವಿಜ್ಞಾನಿ ಡಾ. ಬೇಬಿ ಶ್ವೇತಾ, ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿಯ ಸದಸ್ಯರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಇಮ್ಯಾನುವಲ್ ಸಂತೋಷ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಕುಮಾರ್, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇಅರಸ್, ಸಾಮಾಜಿಕ ಅರಣ್ಯ ಸಂರಕ್ಷಣಧಿಕಾರಿ ಸಭ್ಯಶ್ರೀ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ ಸೇರಿದಂತೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ, ಅಟ್ಟುಗೂಳಿಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೈಗೊಂಡಿರುವ ಜಲ ಸಂರಕ್ಷಣೆ ಕುರಿತಾದ ಕಾಮಗಾರಿ ಸ್ಥಳಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ ನಿರ್ದೇಶಕರಾದ ಪಿ. ಶಿವಶಂಕರ್ ರವರು ಭೇಟಿ ನೀಡಿ ಕಾಮಗಾರಿಗಳ ಅನುμÁ್ಠನದ ಬಗ್ಗೆ ಪರಿಶೀಲನೆ ನಡೆಸಿದರು.
Like this:
Like Loading...
Related